ಶ್ರೀ ಕ್ಷೇತ್ರ ಶಂಕರಪುರ: ಉಸಿರಿಗಾಗಿ ಹಸಿರು ಅಭಿಯಾನ ಚಾಲನೆ

Upayuktha
0


ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ವತಿಯಿಂದ ಉಸಿರಿಗಾಗಿ ಹಸಿರು ಅಭಿಯಾನ ಕಾರ್ಯಕ್ರಮ ಇಂದು ನಡೆಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸಿ ಮಾತನಾಡಿದ ಶ್ರೀ ಕ್ಷೇತ್ರ ಶಂಕರ ಪುರ ಏಕ ಜಾತಿ ಧರ್ಮ ಪೀಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ ಗುರೂಜಿ, ಇಂದು ಪ್ರಕೃತಿ ಹಲವಾರು ವೈರುಧ್ಯಗಳಿಂದ ಕೂಡಿದೆ ಮಳೆಗಾಲದಲ್ಲಿ ಸರಿಯಾಗಿ ಮಳೆ ಬರುತ್ತಿಲ್ಲ ಇದಕ್ಕೆಲ್ಲ ಕಾರಣ ಪ್ರಕೃತಿಯ ನಾಶ ಈ ನಿಟ್ಟಿನಲ್ಲಿ ಉಸಿರಿಗಾಗಿ ಹಸಿರು ಅಭಿಯಾನ ಕ್ಷೇತ್ರದ ವತಿಯಿಂದ ಪ್ರಾರಂಭಿಸಲಾಗಿದೆ. ಪ್ರತಿಯೊಬ್ಬರು ವರ್ಷಕ್ಕೆ ಕನಿಷ್ಠ ಒಂದು ಗಿಡವನಾದರೆ ನೆಟ್ಟು ಬೆಳೆಸುವ ಕಾರ್ಯ ನಡೆಯಬೇಕಾಗಿದೆ ಎಂದರು. ಮುಂದಿನ ದಿನಗಳಲ್ಲಿ ಈ ಅಭಿಯಾನ ರಾಜ್ಯವಾಪಿ ನಡೆಯಲಿದೆ ಎಂದರು.


ಮುಖ್ಯ ಅತಿಥಿ ಸಮಾಜಕಾರ್ಯ ಉಪನ್ಯಾಸಕ ಡಾ. ಗಣೇಶ್ ಪ್ರಸಾದ್ ಜಿ ನಾಯಕ್, ಗಿಡಗಳನ್ನು ವಿತರಿಸಿ ಮಾತನಾಡಿ, ಪ್ರಕೃತಿಯನ್ನು ಉಳಿಸಿದರೆ ಮಾತ್ರ ಜೀವಸಂಕುಲ ಉಳಿಯಬಹುದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಿಡ ನೆಟ್ಟು ಬೆಳೆಸುವ ಕಾರ್ಯ ಮಾಡಬೇಕು ಶ್ರೀ ಕ್ಷೇತ್ರದ ವತಿಯಿಂದ ನಡೆಯುವ ಈ ಯೋಜನೆ ಅಪೂರ್ವವಾಗಿದೆ ಎಂದರು.


ವೇದಿಕೆಯಲ್ಲಿ ಮಂದಿರದ ಟ್ರಸ್ಟಿ ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ರಾಮಪ್ಪ ಪೂಜಾರಿ ಸಂತೆಕಟ್ಟೆ ಮುಂತಾದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಭಕ್ತರಿಗೆ ವಿವಿಧ ಜಾತಿಯ ಗಿಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಸಂಯೋಜಕ, ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top