ವಿದ್ಯೇಂದ್ರತೀರ್ಥ ಶ್ರೀಪಾದರು ಧರ್ಮಸ್ಥಳ ಭೇಟಿ

Upayuktha
0

ಚಿತ್ರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದ ಕ್ಷಣ.

ಉಜಿರೆ: ಮಂಗಳೂರಿನ ಕುಳಾಯಿ ಚಿತ್ರಾಪುರದಲ್ಲಿರುವ ವಿಜಯಧ್ವಜತೀರ್ಥ ಪೀಠದ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಭವ್ಯ ಮೆರವಣಿಗೆಯ ಮೂಲಕ ಆತ್ಮೀಯವಾಗಿ ಸ್ವಾಗತಿಸಲಾಯಿತು.


ಬಳಿಕ ಧರ್ಮಾಧಿಕಾರಿಗಳ ನಿವಾಸವಾದ ಬೀಡಿನಲ್ಲಿ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ಪರವಾಗಿ ಪೂಜ್ಯ ಶ್ರೀಪಾದರನ್ನು ಶಾಲು ಹೊದಿಸಿ ಗೌರವಿಸಿದರು.


ಈ ಸಂದರ್ಭದಲ್ಲಿ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಹಾಗೂ ಸುಪ್ರಿಯಾ ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು.


ಅನಂತರ ಪೂಜ್ಯ ವಿದ್ಯೇಂದ್ರತೀರ್ಥ ಶ್ರೀಪಾದರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೆ, ಅನ್ನಪೂರ್ಣ ಭೋಜನಾಲಯ ಹಾಗೂ ಸರದಿ ಸಾಲು ವ್ಯವಸ್ಥೆಯಾದ “ಶ್ರೀ ಸಾನ್ನಿಧ್ಯ”ವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top