ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್: ದೀಪ ಪ್ರಜ್ಚಲನ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ

Upayuktha
0

ರೋಗಿಗಳನ್ನು ಕರುಣೆಯಿಂದ ಆರೈಕೆಮಾಡಿ- . ಮಿತ್ರಾ ಎಸ್. ರಾವ್‌



ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ವತಿಯಿಂದ ಜೂನ್ 10ರಂದು ಮುಕ್ಕ, ಸುರತ್ಕಲ್ನಲ್ಲಿರುವ ಡೆಂಟಲ್ ಕಾಲೇಜು ಕ್ಯಾಂಪಸ್ನಲ್ಲಿ ದೀಪ ಪ್ರಜ್ಚಲನ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭ–2026ನ್ನು ಆಯೋಜಿಸಲಾಯಿತು. ಕಾರ್ಯಕ್ರಮವು ನರ್ಸಿಂಗ್ ವಿದ್ಯಾರ್ಥಿಗಳ ವೃತ್ತಿಜೀವನದ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿ ಗುರುತಿಸಲ್ಪಟ್ಟಿತು.


ಮಿತ್ರಾ ಎಸ್. ರಾವ್ ಮಾತನಾಡಿ ರೋಗಿಗಳನ್ನು ಸದಾ ನಗುಮುಖದಿಂದ ಹಾಗೂ ಕರುಣೆಯಿಂದ ಆರೈಕೆ ಮಾಡುವಂತೆ, ತಮ್ಮ ಜ್ಞಾನವನ್ನು ನಿರಂತರವಾಗಿ ವೃದ್ಧಿಸಿಕೊಳ್ಳುವಂತೆ ಮತ್ತು ವೃತ್ತಿಪರ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.


ಪ್ರೊ. ಸುಬ್ರಹ್ಮಣ್ಯ ನಾಯಕ್ ಅವರು ಆರೋಗ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳು, ನರ್ಸಿಂಗ್ ವೃತ್ತಿಯ ಸವಾಲುಗಳು ಹಾಗೂ ಕ್ಷೇತ್ರದಲ್ಲಿರುವ ಅಪಾರ ಅವಕಾಶಗಳ ಕುರಿತು ಮಾತನಾಡಿದರು. ಜೀವನಪರ್ಯಂತ ಕಲಿಕೆಯನ್ನು ಅಳವಡಿಸಿಕೊಂಡು ವೃತ್ತಿಪರ ಶ್ರೇಷ್ಠತೆಯನ್ನು ಸಾಧಿಸುವಂತೆ ಅವರು ವಿದ್ಯಾರ್ಥಿಗಳನ್ನು ಪ್ರೇರೇಪಿಸಿದರು.


ದೀಪ ಬೆಳಗಿಸುವ ಸಮಾರಂಭದ ಉದ್ದೇಶ ಮತ್ತು ಮಹತ್ವವನ್ನು ಸಭೆಗೆ ವಿವರಿಸಲಾಯಿತು. ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ಸಮರ್ಪಣೆ ಹಾಗೂ ವೃತ್ತಿಪರ ಬದ್ಧತೆಯ ಮೌಲ್ಯಗಳನ್ನು ಬೆಳೆಸುವಲ್ಲಿ ಸಮಾರಂಭದ ಪಾತ್ರವನ್ನು ಒತ್ತಿ ಹೇಳಲಾಯಿತು. ಮುಖ್ಯ ಅತಿಥಿ ಪ್ರೊ. ಸುಬ್ರಹ್ಮಣ್ಯ ನಾಯಕ್ ಹಾಗೂ ಡಾ. ಜುಬಿ ಮೇರಿ ಚಾಕೋ ಅವರು ಫ್ಲಾರೆನ್ಸ್ ನೈಟಿಂಗೇಲ್ ದೀಪವನ್ನು ಬೆಳಗಿಸುವ ಮೂಲಕ ಜ್ಞಾನ, ಕಾಳಜಿ ಮತ್ತು ಸಹಾನುಭೂತಿಯ ಸಂದೇಶವನ್ನು ಸಾರಿದರು.


ಕಾರ್ಯಕ್ರಮದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ವಿಜಯಲಕ್ಷ್ಮಿ ಆರ್. ರಾವ್, ಶ್ರೀ ಇಶಾನ್ ಎಸ್. ರಾವ್ ಉಪಸ್ಥಿತರಿದ್ದರು.


ಸ್ವಾಗತಿಸಿ ಮಾತನಾಡಿದ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಡೀನ್ ಡಾ. ಜುಬಿ ಮೇರಿ ಚಾಕೋ ಸಹಾನುಭೂತಿ, ಸಮರ್ಪಣೆ ಹಾಗೂ ಕೌಶಲ್ಯಯುತ ಆರೋಗ್ಯ ಸೇವಾ ವೃತ್ತಿಪರರನ್ನು ರೂಪಿಸುವಲ್ಲಿ ಸಮಾರಂಭದ ಮಹತ್ವವನ್ನು ವಿವರಿಸಿದರು. ಮಾನಸಿಕ ಆರೋಗ್ಯ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಜೀವಿತಾ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top