ಶ್ರೀನಿವಾಸ್ ವಿಶ್ವವಿದ್ಯಾಲಯ: ಅಂತರರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Upayuktha
0


ಮಂಗಳೂರು: ಅಂತರರಾಷ್ಟ್ರೀಯ ಮಾದಕ ವಸ್ತು ಮತ್ತು ಅಕ್ರಮ ಸಾಗಣೆ ವಿರೋಧಿ ದಿನಾಚರಣೆ–2026ರ ಅಂಗವಾಗಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್‌ನ ಡಿಜಿಟಲ್ ಮತ್ತು ಸೈಬರ್ ಫೊರೆನ್ಸಿಕ್ ವಿಭಾಗವು ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿತು.


ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವುದು, ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ತಿಳಿಸುವುದು ಹಾಗೂ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರ ಜವಾಬ್ದಾರಿಯನ್ನು ಮನದಟ್ಟು ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.


ಈ ಕಾರ್ಯಕ್ರಮವು ಕೇಂದ್ರ ಸರ್ಕಾರದ "ನಶಾ ಮುಕ್ತ್ ಭಾರತ ಅಭಿಯಾನ್ – ವಿಕಸಿತ ಭಾರತ್ ಕಿ ಪಹಚಾನ್" ಅಭಿಯಾನಕ್ಕೆ ಪೂರಕವಾಗಿ ಆಯೋಜಿಸಲಾಗಿದ್ದು, ಡಿಜಿಟಲ್ ಮತ್ತು ಸೈಬರ್ ಫೊರೆನ್ಸಿಕ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರತ್ ಎಂ.ಎಸ್. ಅಂತರರಾಷ್ಟ್ರೀಯ ಮಾದಕ ವಸ್ತು ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ಮಹತ್ವ ಹಾಗೂ ಯುವಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯತೆಯ ಕುರಿತು ಮಾತನಾಡಿದರು.


ಸಹಾಯಕ ಪ್ರಾಧ್ಯಾಪಕರಾದ ಶೆರಿನ್ ಲಿಯೋನೋರಾ ಮಾದಕ ವ್ಯಸನದಿಂದ ಉಂಟಾಗುವ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಮಸ್ಯೆಗಳು, ಸಾಮಾಜಿಕ ದುಷ್ಪರಿಣಾಮಗಳು ಹಾಗೂ ಆರಂಭಿಕ ಹಂತದಲ್ಲೇ ಜಾಗೃತಿ ಮತ್ತು ತಡೆ ಕ್ರಮಗಳ ಮಹತ್ವದ ಕುರಿತು ವಿವರವಾದ ಮಾಹಿತಿ ನೀಡಿದರು.


ಪ್ರಾಧ್ಯಾಪಕರಾದ ನಿತಿನ್‌ಕುಮಾರ್ ಎಂ. ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ವಿರೋಧಿ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಸ್ವೀಕರಿಸಿ, ಮಾದಕ ವಸ್ತುಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top