ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Upayuktha
0

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರು ಇಲ್ಲಿ ವಿಶ್ವ ಪರಿಸರ ದಿನವನ್ನು ಕಾಲೇಜಿನ ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರ ವಿಭಾಗಗಳು ಮತ್ತು ಇಕೋ ಕ್ಲಬ್ ಸಂಯುಕ್ತವಾಗಿ, ಪರಿಸರದತ್ತ ಬದ್ಧತೆಯೊಂದಿಗೆ ಆಯೋಜಿಸಿತು.


ಎಸ್‌ವಿಎಸ್ ಕಾಲೇಜು, ಬಂಟ್ವಾಳದ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರೂ ವಿಭಾಗಾಧ್ಯಕ್ಷರೂ ಆದ ಡಾ. ವಿನಾಯಕ ಕೆ. ಎಸ್. ಅವರು ಸಂಪನ್ಮೂಲ ವ್ಯಕ್ತಿಯಾಗಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯದಿಂದ ಉಂಟಾಗುತ್ತಿರುವ ಸವಾಲುಗಳನ್ನು ವಿವರಿಸಿ, ಪರಿಸರ ಸಂರಕ್ಷಣೆಗೆ ಶಾಶ್ವತ ಅಭಿವೃದ್ಧಿ ಅತ್ಯಾವಶ್ಯಕವೆಂದು ಹೇಳಿ ,ಮೈಕ್ರೋಪ್ಲಾಸ್ಟಿಕ್ ಎಂಬ ಗಂಭೀರ ಮತ್ತು ಹೆಚ್ಚಾಗಿ ಗಮನಕ್ಕೆ ಬಾರದ ಪರಿಸರ ಸಮಸ್ಯೆಯ ಕುರಿತು ಬೆಳಕು ಚೆಲ್ಲಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಹೆಚ್ಚುತ್ತಿರುವ ಭೌತಿಕ ಮನೋಭಾವಗಳು ಯುವಪೀಳಿಗೆ ಮೇಲೆ ದುಷ್ಪರಿಣಾಮ ಬೀರುತ್ತಿರುವುದಾಗಿ ಎಚ್ಚರಿಸಿ, ಸಂಪತ್ತಿಗಿಂತ ಜೀವನ ಮೌಲ್ಯಗಳಿಗೆ ಆದ್ಯತೆ ನೀಡಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿ, ಸಾಲುಮರದ ತಿಮ್ಮಕ್ಕ ಅವರಂತಹ ಮಹನೀಯರಿಂದ ಪ್ರೇರಣೆ ಪಡೆಯುವಂತೆ ಕರೆ ನೀಡಿದರು.


ಕಾರ್ಯಕ್ರಮಕ್ಕೆ ವಿಶೇಷ ಅರ್ಥ ತುಂಬುವಂತೆ, ಸಂದೀಪ್ ಶೆಟ್ಟಿ ಅರಿಯಡ್ಕ ಅವರು RR-38 ಜಾತಿಯ ಹಲಸು ಸಸಿಯನ್ನು ದೇಣಿಗೆಯಾಗಿ ನೀಡಿದ್ದು, ಅದನ್ನು ಕಾಲೇಜು ಆವರಣದಲ್ಲಿ ನೆಡಲಾಯಿತು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ|ವಿನಯಚಂದ್ರ ಅವರು ಸಕ್ರಿಯವಾಗಿ ಭಾಗವಹಿಸಿದರು. ಕಾರ್ಯಕ್ರಮವನ್ನು ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶಶಿಪ್ರಭಾ ಬಿ. ಅವರು ಹಾಗೂ ಇಕೋ ಕ್ಲಬ್ ಸಂಯೋಜಕಿಯಾದ ಸ್ಮಿತಾ ವಿವೇಕ್ ಅವರು ಸಂಯೋಜಿಸಿದರು.


ರಚನಾ ಮತ್ತು ಅಖಿಲಾ ಅವರು ಪ್ರಾರ್ಥನೆ ನೆರವೇರಿಸಿ, ನಿಫಾನಾ ಸ್ವಾಗತ ಹಾಗೂ ಯಜ್ಞೇಶ್ ವಂದನಾರ್ಪಣೆ ಸಲ್ಲಿಸಿದರು, ಕಾರ್ಯಕ್ರಮವನ್ನು ಹಿಬಾ ಶೇಖ್ ನಿರ್ವಹಿಸಿದರು.


ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳು ಗಿಡ ನೆಡುವ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಹಸಿರು ಪರಿಸರ ನಿರ್ಮಾಣದತ್ತ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top