ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವಾಣಿಜ್ಯ ಸಂಘದ ಆಶ್ರಯದಲ್ಲಿ ವಾಣಿಜ್ಯ ವಿಭಾಗದಲ್ಲಿ ವೃತ್ತಿಪರ ಆಯ್ಕೆಗಳ ಕುರಿತಾಗಿ ಮಾಹಿತಿ ಕಾರ್ಯಾಗಾರವು ಜೂನ್ 10 ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಸಿಎ ಸ್ವಸ್ತಿಕ್. ಪಿ ಬೆಂಗಳೂರು ಮಾತನಾಡಿ, ವಾಣಿಜ್ಯ ವಿಭಾಗವು ವ್ಯವಹಾರ ಕ್ಷೇತ್ರದ ಭಾಷೆಯಾಗಿದ್ದು, ವಾಣಿಜ್ಯ ವಿಭಾಗದಲ್ಲಿ ವಿಪುಲವಾದ ಅವಕಾಶಲಿವೆ. ಈ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ತಿಳಿಸಿದರು. ಲೆಕ್ಕ ಪರಿಶೋಧಕ (ಚಾರ್ಟೆಡ್ ಅಕೌಂಟೆಂಟ್) ಕ್ಷೇತ್ರವು ವಿಪುಲ ಅವಕಾಶಗಳ ಕ್ಷೇತ್ರವಾಗಿದ್ದು, ಕಠಿಣ ಪರಿಶ್ರಮದ ಮೂಲಕ ಇಲ್ಲಿ ಯಶಸ್ಸನ್ನು ಸಾಧಿಸಬಹುದು. ಹಾಗೆಯೇ, ಹಣಕಾಸು ವ್ಯವಹಾರ, ಬ್ಯಾಂಕಿಂಗ್ ಮುಂತಾದ ವಿಭಾಗಗಳಲ್ಲೂ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ವಾಣಿಜ್ಯ ವಿಭಾಗವು ದಿನನಿತ್ಯದ ವ್ಯವಹಾರದೊಂದಿಗೆ ಉತ್ತಮ ಸಂಪರ್ಕ ಹೊಂದಿರುವ ವಿಭಾಗವಾಗಿದ್ದು, ನೀವು ಕಲಿತ ವಿದ್ಯೆ ನಿಮ್ಮ ನಿತ್ಯ ಜೀವನದಲ್ಲಿ ಉಪಯೋಗಕ್ಕೆ ಬರುತ್ತದೆ ಎಂದು ತಿಳಿಸಿದರು. ಕಠಿಣ ಪರಿಶ್ರಮ ಮತ್ತು ಆಸಕ್ತಿಯಿಂದ ಕಲಿತು ಉತ್ತಮ ಅಂಕಗಳೊಂದಿಗೆ ಯಶಸ್ಸನ್ನು ಸಾಧಿಸಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಗೋವಿಂದ ಪ್ರಕಾಶ್ ಸಿ. ಎಚ್ ಉಪಸ್ಥಿತರಿದ್ದರು. ಕಾಲೇಜಿನ ಬೋಧಕ/ ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿಗಳಾದ ಗುಣಿಕ ನಾಯಕ್ ಸ್ವಾಗತಿಸಿ, ಸ್ನೇಹಾ ವಂದಿಸಿ, ಸ್ವಿನಿಕಾ ವಿಯೋಲ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

