ಅಧ್ಯಕ್ಷರಾಗಿ ಹೆಚ್ ವಿ ಭವಿತ್ ಗೌಡ, ಕಾರ್ಯದರ್ಶಿಯಾಗಿ ಇಂದೀವರ್ ಪಿ ಪಿ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ 2026 - 27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್. ರವರ ಮಾರ್ಗದರ್ಶನದಲ್ಲಿ ನಡೆಯಿತು. ಅಧ್ಯಕ್ಷರಾಗಿ ಹೆಚ್.ವಿ. ಭವಿತ್ ಗೌಡ, ಉಪಾಧ್ಯಕ್ಷರಾಗಿ ತನ್ಮಯ್ ನಾಯಕ್, ಕಾರ್ಯದರ್ಶಿಯಾಗಿ ಇಂದೀವರ್ ಪಿ.ಪಿ. ಹಾಗೂ ಜೊತೆ ಕಾರ್ಯದರ್ಶಿಯಾಗಿ ಗಾಯನ ಗೌಡ ಎಸ್.ಎಂ. ಆಯ್ಕೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ವ್ಯಕ್ತಿಯ ಮುಖ ಭಾವ ಮಾತ್ರವಲ್ಲ. ಅವರ ಹೃದಯ ಶ್ರೀಮಂತಿಕೆಯನ್ನು ಅರಿತು ಮತವನ್ನು ಚಲಾಯಿಸಬೇಕು. ವಿದ್ಯಾರ್ಥಿ ಸಂಘದ ಚುನಾವಣೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ, ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದರು.
ವಿದ್ಯಾರ್ಥಿಗಳು ಮತಗಟ್ಟೆಗೆ ಆಗಮಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕಾರ್ಯದರ್ಶಿ ಹುದ್ದೆಗಳಿಗೆ ಒಟ್ಟು 9 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ವಿಜೇತ ಅಭ್ಯರ್ಥಿಗಳು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಕಾಲೇಜಿನ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ಕಾಲೇಜಿನ ಪ್ರಾಂಶುಪಾಲರು ನೂತನ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಚುನಾವಣಾಧಿಕಾರಿಗಳಾಗಿ ಪ್ರದೀಪ್ ಕೆ. ವೈ. ಕಾರ್ಯನಿರ್ವಹಿಸಿದರು. ಉಪನ್ಯಾಸಕವೃಂದದವರು ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
