ವಿದ್ಯಾರ್ಥಿ ಜೀವನದಲ್ಲಿ ಸುಖಾಪೇಕ್ಷೆ ಬೇಡ; ನಿರಂತರ ಕ್ರಿಯಾಶೀಲತೆ, ವಿದ್ಯೆಯೇ ಗುರಿಯಾಗಿರಲಿ: ಪ್ರೊ. ಗಣಪತಿ ಭಟ್‌ ಕುಳಮರ್ವ

Upayuktha
0


ಬೆಳ್ತಂಗಡಿ: ನೀವು ಸಂಪಾದಿಸುವ ವಿದ್ಯೆಯು ಸರ್ವಧನಗಳಲ್ಲಿಯೂ ಅತ್ಯಂತ ಪ್ರಧಾನವಾದದ್ದು. ಇದನ್ನು ಏಕಾಗ್ರತೆಯಿಂದ ನೀವು ಸಾಧಿಸಬೇಕು. ವಿದ್ಯಾರ್ಥಿಯಾದವನು ಸುಖವನ್ನು ತ್ಯಜಿಸಬೇಕು. ನಿರಂತರ ಕ್ರಿಯಾಶೀಲರಾಗಿರಬೇಕು ಎಂದು ವಿಶ್ರಾಂತ ಪ್ರಾಂಶುಪಾಲರಾದ ಪ್ರೊ. ಗಣಪತಿ ಭಟ್ ಕುಳಮರ್ವ ನುಡಿದರು.


ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಲಿಲ್ಲಿ ಪಿವಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಕಾಲೇಜಿನ ನೀತಿ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.


ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಅಜಿತ್ ಆರಿಗ, ಅರ್ಥಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ವಸಂತಿ ಪಿ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀಮತಿ ಶಿಲ್ಪಾ ಡಿ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಎಲ್ಲಾ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು. ದ್ವಿತೀಯ ಪಿಯುಸಿ ಪಬ್ಲಿಕ್ ಪರೀಕ್ಷೆಯಲ್ಲಿ ವಿಷಯವಾರು ಅತ್ಯಂತ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ವಿತರಿಸಲಾಯಿತು.


ವಿದ್ಯಾರ್ಥಿನಿಯರಾದ ಶಬ್ನಂ ಮತ್ತು ಸ್ಪೂರ್ತಿ ನಿರೂಪಿಸಿ, ಗಾಯತ್ರಿ ಸ್ವಾಗತಿಸಿ, ಶೇಕ್ ಅದಿಲ್ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top