ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಪುತ್ತೂರು ಇದರ ಎನ್‌ಸಿಸಿ ಘಟಕದ ವತಿಯಿಂದ ಅಗ್ನಿವೀರ್ ಯೋಜನೆಯಡಿ ಭಾರತೀಯ ಸೇನೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ
ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳಾದ ದ್ವಿತೀಯ ಬಿಎ ವಿಭಾಗದ
ವಿಜಿತ್ ಎಂ, ದ್ವಿತೀಯ ಬಿಸಿಎ ವಿಭಾಗದ ಭವಿತ್, ಎಂ.ಎಸ್. ಸೋನಲ್
ಹಾಗೂ ಪ್ರಪಂಚ್ ಅವರನ್ನು ಅವರ ಸಾಧನೆಗಾಗಿ ಸನ್ಮಾನಿಸಿದ ಕಾಲೇಜಿನ ಸಂಚಾಲಕರಾದ ಅತಿ ವಂದನೀಯ ಡಾ. ಜೆ.ಬಿ.
ಸಾಲ್ದಾನಾ ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿ, “ವಿದ್ಯಾರ್ಥಿಗಳ ಈ ಸಾಧನೆ ಮತ್ತು ಧೈರ್ಯದ ಬಗ್ಗೆ
ಕಾಲೇಜಿಗೆ ಹೆಮ್ಮೆ ಇದೆ. ಅವರು ಮುಂದಿನ ದಿನಗಳಲ್ಲಿ ಇನ್ನೂ ಉನ್ನತ ಹುದ್ದೆಗಳನ್ನು ಅಲಂಕರಿಸಲಿ” ಎಂದು
ಶುಭ ಹಾರೈಸಿದರು.
ಕಾಲೇಜಿನ
ಪ್ರಾಂಶುಪಾಲರಾದ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೋ ಸಾಧಕರನ್ನು ಅಭಿನಂದಿಸಿ, ಅವರ ಈ ಸಾಧನೆಯು ಇತರ
ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಹೇಳಿದರು.
ಕಾಲೇಜಿನ
ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಜಾನ್ಸನ್ ಡೇವಿಡ್ ಸಿಕ್ವೇರಾ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ, ಕುಲಸಚಿವರು (ಶೈಕ್ಷಣಿಕ) ಡಾ. ನಾರ್ಬರ್ಟ್ ಮಸ್ಕರೆನ್ಹಾಸ್,
ಕುಲಸಚಿವರು (ಪರೀಕ್ಷಾಂಗ) ಡಾ. ವಿನಯಚಂದ್ರ, ಹಣಕಾಸು ಅಧಿಕಾರಿ ಡಾ. ಎಡ್ವಿನ್ ಡಿ’ಸೋಜಾ, ಹಾಗೂ ಕಚೇರಿ
ಅಧೀಕ್ಷಕಿ ಶ್ರೀಮತಿ ರುಫಿನಾ ಡಿ’ಸೋಜಾ ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


