ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ
ಪುತ್ತೂರು: ಅವಕಾಶಗಳನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮವಾಗಿರಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡಾ ಶ್ರದ್ಧೆಯಿಂದ ಕಲಿಕೆಯಲ್ಲಿ ಮುಂದುವರಿದರೆ ಯಶಸ್ಸು ಲಭಿಸುತ್ತದೆ ಎಂದು ನರಿಮೊಗರಿನ ಸರಸ್ವತಿ ವಿದ್ಯಾಲಯದ ಸಂಚಾಲಕ ಅವಿನಾಶ್ ಕೊಡೆಂಕಿರಿ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ ಶಿಕ್ಷಕ ಸಂಘದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ವಿದ್ಯಾರ್ಥಿಗಳು ಈ ದೇಶದ ಅಸ್ತಿ. ಕಲಿಕೆಯಲ್ಲಿ ತೊಡಗಿಸಿಕೊಳ್ಳುವಾಗ ಬರೀ ಓದಿಗೆ ಮಾತ್ರ ಮಹತ್ವ ಕೊಡುವುದಲ್ಲ. ಜೊತೆಗೆ ದೇಶದ ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆಯೂ ಅರಿಯಬೇಕು. ಶಿಕ್ಷಣದ ಜೊತೆಗೆ ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಹಾಗೂ ಸಂಸ್ಥೆಯ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಪ್ರಸ್ತಾವನೆಗೈದು ಸ್ವಾಗತಿಸಿದರು ಉಪ ಪ್ರಾಂಶುಪಾಲೆ ವಿನುತಾ ಸಾಲೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


