ಪುತ್ತೂರು: ಇಲ್ಲಿನ ಸುದಾನ ವಸತಿ ಶಾಲೆಯಲ್ಲಿ ಹೊಸ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ 'ಫ್ರೆಶರ್ಸ್ ಡೇ' ಕಾರ್ಯಕ್ರಮವು ಜರುಗಿತು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶೋಭಾ ನಾಗರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭಾ ಶಕ್ತಿಯನ್ನು ಗುರುತಿಸಿಕೊಂಡು ಮುಂದುವರಿದಾಗ ಸೋಮಾರಿತನವು ದೂರವಾಗುತ್ತದೆ. ಬುದ್ಧಿಯು ಚುರುಕುಗೊಂಡು ಸೃಜನಶೀಲರಾಗಲು ಸಾಧ್ಯವಿದೆ ಎಂದು ಕರೆನೀಡಿದರು.
ಹೊಸದಾಗಿ ಶಾಲೆಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ನಡೆಯಿತು. ಪ್ರತಿಭಾ ಕಲಾಸಂಘದ ನಿರ್ದೇಶಕಿ ಶ್ರೀಮತಿ ಬಕುಳ ಕಾರ್ಯಕ್ರಮವನ್ನು ನಿರ್ವಹಿಸಿದರು. ಶ್ರೀಮತಿ ಪಲ್ಲವಿ ಸಹಕರಿಸಿದರು. ಶಾಲೆಯ ಪ್ರತಿಭಾ ಕಲಾ ಸಂಘವು ಕಾರ್ಯಕ್ರಮವನ್ನು ಆಯೋಜಿಸಿತ್ತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


