ಬಾಲ ವೈಜ್ಞಾನಿಕ ಪ್ರದರ್ಶನಿ ಸ್ಪರ್ಧೆಯಲ್ಲಿ ಸುದಾನ ಶಾಲೆಯ ಸೃಷ್ಟಿ ಎನ್ ವಿ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0



ಪುತ್ತೂರು: ಶಿಕ್ಷಣ ಇಲಾಖೆಯವರು ನಡೆಸುವ ನೂತನ ಶೈಕ್ಷಣಿಕ ವರ್ಷದ ರಾಜ್ಯಮಟ್ಟದ 'ಬಾಲ ವೈಜ್ಞಾನಿಕ ಪ್ರದರ್ಶನಿ ಸ್ಪರ್ಧೆಯಲ್ಲಿ ಸುದಾನ ಶಾಲೆಯ ವಿದ್ಯಾರ್ಥಿನಿ ಸೃಷ್ಟಿ N.V ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರು ನಿವೃತ್ತ ಸೈನಿಕ ಶ್ರೀ ವಿಜಯ್ ಕುಮಾರ್ ನೇಲಪ್ಪಾಲು,ಶ್ರೀಮತಿ ರಂಜಿತ ಇವರ ಪುತ್ರಿ.


ವಿಕಸಿತ ಹಾಗೂ ಆತ್ಮ ನಿರ್ಭರ ಭಾರತಕ್ಕಾಗಿ STEM ಎಂಬ ಪರಿಕಲ್ಪನೆಯ ಅಡಿಯಲ್ಲಿ ಉದಯೋನ್ಮುಖ ತಂತ್ರಜ್ಞಾನ ಎಂಬ ಉಪವಿಷಯದಡಿಯಲ್ಲಿ ಈಕೆ ತಯಾರಿಸಿದ ವಿಜ್ಞಾನ ಮಾದರಿಯು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದು,  ಈಗ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದೆ. ಇವರಿಗೆ ಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ರಂಜಿತಾ ಮಾರ್ಗದರ್ಶನ ಮಾಡಿದ್ದಾರೆ. 


ಇವರನ್ನು ಶಾಲಾ ಸಂಚಾಲಕರಾದ ರೆ.ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿಶ್ರೀಮತಿ ಶೋಭಾ ನಾಗರಾಜ್ ಅಭಿನಂದಿಸಿ, ಶುಭಹಾರೈಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top