ಧರ್ಮಸ್ಥಳದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ

Upayuktha
0

 


ಉಜಿರೆ: ಧರ್ಮಸ್ಥಳ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಜೂ.25, ಗುರುವಾರ ನೇತ್ರಾವತಿ ಸ್ನಾನಘಟ್ಟದಲ್ಲಿ “ಸ್ವಚ್ಛ ನೇತ್ರಾವತಿ” ಅಭಿಯಾನ ಆಯೋಜಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಸಂಜೀವಿನಿ ಮಹಿಳಾ ಒಕ್ಕೂಟ, ಕನ್ಯಾಕುಮಾರಿ ಯುವತಿ ಮಂಡಲ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅನೇಕ ಸ್ಥಳೀಯ ಸಂಘಟನೆಗಳ ಸದಸ್ಯರು ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ “ಸ್ವಚ್ಛತಾ ಸೂಚನಾ ಫಲಕ” ಅನಾವರಣಗೊಳಿಸಿ ಅಭಿಯಾನಕ್ಕೆ ಚಾಲನೆ ನೀಡಿದರು.

ಧರ್ಮಸ್ಥಳ ಗ್ರಾಮ ಪಂಚಾಯಿತಿ ಪಿ.ಡಿ.ಒ. ಗಾಯತ್ರಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಮೀಳಾ ಧನ್ಯವಾದವಿತ್ತರು.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top