ವಿದ್ಯಾರ್ಥಿಗಳ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಅವಶ್ಯ: ಪ್ರೀತಿ ಶೆಣೈ
ಪುತ್ತೂರು: ವಿವಿಧ ಭಾಷೆ, ಸಂಸ್ಕೃತಿ, ಸಾಮಾಜಿಕ ಹಿನ್ನೆಲೆ ಹಾಗೂ ಜೀವನಾನುಭವಗಳನ್ನು ಹೊಂದಿರುವ ವಿದ್ಯಾರ್ಥಿಗಳು ದೇಶದ ಉತ್ತಮ ಪ್ರಜೆಯಾಗಿ ಮೂಡಿಬರುವಂತೆ ಮಾಡುವುದು ಶಿಕ್ಷಕರ ಕರ್ತವ್ಯವಾಗಿದೆ. ಪರಸ್ಪರ ಗೌರವ, ಸಹಿಷ್ಣುತೆ ಹಾಗೂ ಸಮಾವೇಶಾತ್ಮಕ ಶಿಕ್ಷಣದ ಮೌಲ್ಯಗಳನ್ನು ಬೆಳೆಸಿದಾಗ ವಿದ್ಯಾರ್ಥಿಗಳು ಸರ್ವತೋಮುಖ ಅಭಿವೃದ್ಧಿ ಹೊಂದುತ್ತಾರೆ ಎಂದು ಸಂಪನ್ಮೂಲ ವ್ಯಕ್ತಿ ಪ್ರೀತಿ ಶೆಣೈ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಶಿಕ್ಷಕರ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದರು.
ತರಬೇತಿಯಲ್ಲಿ ಶಿಕ್ಷಕರಿಗೆ ಒತ್ತಡ ನಿರ್ವಹಣೆ, ತರಗತಿ ನಿರ್ವಹಣೆ, ತರಗತಿಯ ಸಾಮರ್ಥ್ಯ ವಿಕಸನ ಕಾರ್ಯತಂತ್ರಗಳು ಹಾಗೂ ಭಾರತೀಯ ಶಾಲೆಗಳ ಸಾಂಸ್ಕೃತಿಕ ವಾಸ್ತವತೆಗಳು ಮೊದಲಾದ ವಿಚಾರಗಳ ಕುರಿತು ತರಬೇತಿಯನ್ನು ಪಡೆಯುತ್ತಿರುವುದರಿಂದ ಪರಿಣಾಮಕಾರಿ ಬೋಧನಾ ವಿಧಾನ ಅಳವಡಿಸಿಕೊಳ್ಳಬಹುದು ಎಂದರು.
ಶಿಕ್ಷಕರು ತಮ್ಮ ವೃತ್ತಿ ಜೀವನದಲ್ಲಿ ಒತ್ತಡಗಳನ್ನು ಸಮರ್ಥವಾಗಿ ನಿಭಾಯಿಸುವುದು ಅವಶ್ಯ. ಮಾನಸಿಕ ಸಮತೋಲನ ಕಾಪಾಡಿಕೊಳ್ಳುವುದು ಹಾಗೂ ಸಕಾರಾತ್ಮಕ ಮನೋಭಾವನೆ ತೋರಬೇಕು. ಸಾಮರ್ಥ್ಯ ವಿಕಸನ ಕಾರ್ಯತಂತ್ರಗಳ ಮೂಲಕ ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿರುವ ವಿಶೇಷ ಪ್ರತಿಭೆ, ಆಸಕ್ತಿ ಹಾಗೂ ಸಾಮರ್ಥ್ಯಗಳನ್ನು ಗುರುತಿಸಿ ಅವುಗಳನ್ನು ಅಭಿವೃದ್ಧಿಪಡಿಸುವ ಮೂಲಕ ಕಲಿಕೆಯ ಗುಣಮಟ್ಟವನ್ನು ಹೆಚ್ಚಿಸಬೇಕು ಎಂದರು.
ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಪ್ರಾಂಶುಪಾಲೆ ಕು. ಮಾಲತಿ ಡಿ., ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರು. ವಿದ್ಯಾಲಯದ ಶಿಕ್ಷಕಿ ಶರಣ್ಯ ಪ್ರಾರ್ಥಿಸಿ, ಕೃತ್ತಿಕಾ ಸ್ವಾಗತಿಸಿದರು. ದೀಪ್ತಿ ವಂದಿಸಿ, ಸ್ವಾತಿ ಕಾರ್ಯಕ್ರಮ ನಿರೂಪಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


