ತೆಂಕನಿಡಿಯೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಸ್ನಾತಕೋತ್ತರ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶ ಸಂಯುಕ್ತ ಆಶ್ರಯದಲ್ಲಿ "ಸಂಶೋಧನಾ ಕಲ್ಪನೆಯಿಂದ ಸಂಶೋಧನಾ ವಿಷಯದವರೆಗೆ: ಪರಿಣಾಮಕಾರಿ ವಿಷಯ ಆಯ್ಕೆಯ ತಂತ್ರಗಳು" ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಜೂನ್ 2, 2026ರಂದು ಕಾಲೇಜಿನಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಬಾಲರಾಜ್ ಡಿ. ಬಿ. ಮಾತನಾಡಿ, ಸಂಶೋಧನಾ ವಿಷಯವನ್ನು ಆಯ್ಕೆ ಮಾಡುವಲ್ಲಿ ಅನುಸರಿಸಬೇಕಾದ ವಿಧಾನಗಳು, ಉತ್ತಮ ಸಂಶೋಧನಾ ವಿಷಯದ ಲಕ್ಷಣಗಳು, ಸಾಹಿತ್ಯ ಸಮೀಕ್ಷೆಯ ಮಹತ್ವ ಹಾಗೂ ಸಂಶೋಧನಾ ಕ್ಷೇತ್ರದಲ್ಲಿನ ಹೊಸ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ವಾಣಿಜ್ಯ ವಿಭಾಗದ ಮುಖ್ಯಸ್ಥೆ ಬಿಂದು ಟಿ., ಸಹಾಯಕ ಪ್ರಾಧ್ಯಾಪಕರಾದ ಮರ‍್ವಿನ್ ಡಿಸೋಜಾ, ಉಪನ್ಯಾಸಕರಾದ ಸ್ಮಿತಾ ಹಾಗೂ ಶ್ರೀಮತಿ ನಾಗಲಕ್ಷ್ಮಿ ಉಪಸ್ಥಿತರಿದ್ದರು.
ಪ್ರಥಮ ಎಂ.ಕಾಂ ಸ್ನೇಹಾ ಮತ್ತು ತಂಡ ಪ್ರಾರ್ಥಿಸಿ, ಅವಿನಾಶ್ ನಿರೂಪಣೆ ಮಾಡಿದರು. ಪ್ರಜ್ವಲ್ ಸ್ವಾಗತಿಸಿ, *ಪ್ರತೀಕ್ಷಾ* ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಪೂಜಾ ವಂದಿಸಿದರು. ಎಂ.ಕಾಂ ಸಂಯೋಜಕರಾದ ಡಾ. ದತ್ತ ಕುಮಾರ್ ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


