ಮಕ್ಕಳ ಹಕ್ಕುಗಳ ಜಾಗೃತಿಯಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ವದ್ದು: ಪ್ರೊ.ವಿಜಯಾ ಕೋರಿಶೆಟ್ಟಿ

Upayuktha
0




ವಿಜಯಪುರ: ಹದಿಹರೆಯದ ಮಕ್ಕಳ ಆರೋಗ್ಯ, ಮಕ್ಕಳ ಹಕ್ಕುಗಳು, ರಸ್ತೆ ಸುರಕ್ಷತೆ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.


ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಮಕ್ಕಳ ವಿಷಯಗಳ ಕುರಿತು ಕರ್ನಾಟಕ ರಾಜ್ಯದ ಪತ್ರಕರ್ತರಿಗೆ ಪರಿಚಯ” ವಿಷಯದಡಿ ಕಿಶೋರರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಮಕ್ಕಳ ಹಕ್ಕುಗಳು, ಆರೋಗ್ಯ ಸಮಸ್ಯೆಗಳು, ಹೆಚ್ಚುತ್ತಿರುವ ನಾನ್-ಕಮ್ಯುನಿಕೇಬಲ್ ರೋಗಗಳು, ಪೌಷ್ಟಿಕ ಆಹಾರ ಹಾಗೂ ರಸ್ತೆ ಸುರಕ್ಷತೆ ಕುರಿತಂತೆ ಈ ಕಾರ್ಯಾಗಾರದಲ್ಲಿ ಚರ್ಚೆ ನಡೆಯುತ್ತಿರುವುದು ಅತ್ಯಂತ ಮಹತ್ವದ್ದಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳು ಮಕ್ಕಳ ಜೀವನದ ಮೇಲೆ ಹೆಚ್ಚು ಪ್ರಭಾವ ಬೀರುತ್ತಿದ್ದು, ಪತ್ರಕರ್ತರು ಹಾಗೂ ಮಾಧ್ಯಮಗಳು ಸುದ್ದಿಗಳನ್ನು ಅತ್ಯಂತ ಸಂವೇದನಾಶೀಲವಾಗಿ ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.


ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಯುನಿಸೆಫ್, ಹೈದರಾಬಾದ್‌ನ ಪ್ರೊಸೂನ್ ಸೇನ್ ಮಾತನಾಡಿ, ಕಿಶೋರ ವಯಸ್ಸಿನ ಮಕ್ಕಳಲ್ಲಿ ಅಸಂಕ್ರಾಮಿಕ ರೋಗಗಳ ಪ್ರಮಾಣ ಹೆಚ್ಚುತ್ತಿವೆ. 11 ರಿಂದ 19 ವರ್ಷದ ವಯಸ್ಸಿನಲ್ಲಿಯೇ ಮಾನಸಿಕ ಆರೋಗ್ಯ ಸಮಸ್ಯೆ, ಮಧುಮೇಹ, ಕ್ಯಾನ್ಸರ್ ಹಾಗೂ ಹೃದಯ ಸಂಬಂಧಿತ ಕಾಯಿಲೆಗಳು ಹೆಚ್ಚಾಗುತ್ತಿವೆ. ಜಂಕ್ ಫುಡ್ ಸೇವನೆ ಹಾಗೂ ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ ಎಂದರು.


ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಮಕ್ಕಳ ಸಮಸ್ಯೆಗಳು, ಗ್ರಾಮೀಣ ಅಭಿವೃದ್ಧಿ ಹಾಗೂ ಸಾಮಾಜಿಕ ವಿಷಯಗಳಿಗೆ ಪತ್ರಕರ್ತರು ಹೆಚ್ಚಿನ ಆದ್ಯತೆ ನೀಡಬೇಕು. ಪರಿಣಾಮಕಾರಿ ಮತ್ತು ತುರ್ತುಭಾವ ಮೂಡಿಸುವ ಬರವಣಿಗೆಯಿಂದ ಸಮಾಜದ ಸಮಸ್ಯೆಗಳನ್ನು ಜನರ ಗಮನಕ್ಕೆ ತರಬೇಕು. ಅಷ್ಟೇ ಅಲ್ಲದೇ ಈ ಕಾರ್ಯಾಗಾರ ಪತ್ರಕರ್ತರ ನಡುವೆ ಅನುಭವ ವಿನಿಮಯ ಹಾಗೂ ಹೊಸ ಚಿಂತನೆಗಳಿಗೆ ಉತ್ತಮ ವೇದಿಕೆಯಾಯಿತು ಎಂದರು.


ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ ಸಪ್ನಾ ಎಂ.ಎಸ್, ಪ್ರ‍್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯದ ಹಲವು ಕಡೆಗಳಲ್ಲಿ ಇಂಥ ಕಾರ್ಯಾಗಾರಗಳನ್ನು ಸಂಘಟಿಸುವ ಮೂಲಕ ಪತ್ರಕರ್ತರಲ್ಲಿ ಕಿಶೋರರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.


ಕಾರ್ಯಕ್ರಮದಲ್ಲಿ ಡಾ.ರಾಕೇಶ್ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರು, ಮತ್ತಿತರಿದ್ದರು. ಮಂಜುನಾಥ್ ನಿರೂಪಿಸಿದರು, ಕಾರ್ಯಕ್ರಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ ಸಪ್ನಾ ಎಂ.ಎಸ್ ಸ್ವಾಗತಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top