ಬಪ್ಪಳಿಗೆ ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಸ್ವಾಗತ

Upayuktha
0

ಸನಾತನ ಧರ್ಮದ ಮಹತ್ವ ಅರಿಯುವುದು ಅವಶ್ಯ: ಸುಬ್ರಹ್ಮಣ್ಯ ನಟ್ಟೋಜ



ಪುತ್ತೂರು: ಸನಾತನ ಧರ್ಮದ ಪರಂಪರೆಗೆ ವೈಜ್ಞಾನಿಕವಾದ ಕಾರಣವಿದೆ. ಸನಾತನ ಧರ್ಮದ ರೀತಿ ರಿವಾಜುಗಳ ಸಾರವನ್ನು ಆಳವಾಗಿ ಅಧ್ಯಯನ ಮಾಡಲು ಇನ್ನಷ್ಟು ವರ್ಷಗಳ ಅಗತ್ಯವಿದೆ. ಸನಾತನ ಧರ್ಮದಲ್ಲಿ ಪೂಜೆ, ಪುನಸ್ಕಾರ, ಹೋಮ, ಹವನಗಳಿಗೆ ಅದರದೇ ಆದ ಮಹತ್ವವಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. 


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿ.ಬಿ.ಎಸ್.ಇ. ವಿದ್ಯಾಲಯದ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ವಿದ್ಯಾರ್ಥಿ ಜೀವನದಲ್ಲಿ ಮಕ್ಕಳು ದೇಶಪ್ರೇಮ ಹಾಗೂ ಧರ್ಮಪ್ರೇಮದ ಅಗತ್ಯತೆಯನ್ನು ಅರಿಯಬೇಕು ಎಂದು ವಾಗ್ಮಿಗಳು ಹಾಗೂ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ ಹೇಳಿದರು.


ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ., ಬಾಲ್ಯದಲ್ಲಿ ಮಕ್ಕಳಿಗೂ ಸಂಸ್ಕೃತಿ, ಸಂಪ್ರದಾಯದ ಅರಿವಿನ ರಕ್ಷಕವಚದ ಅಗತ್ಯವಿದೆ ಎಂದರು. 


ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಾಗ್ಮಿಗಳು ಹಾಗೂ ಪುರೋಹಿತರಾದ ಶ್ರೀಕೃಷ್ಣ ಉಪಾಧ್ಯಾಯ ನೇತೃತ್ವದಲ್ಲಿ ಗಣಹೋಮ ನೆರವೇರಿತು. ಮಕ್ಕಳಿಗೆ ಹೊದಲು ಹಾಕಿ, ಆರತಿ ಬೆಳಗಿ, ಹೂವು-ಕುಂಕುಮ ಇಟ್ಟು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. 


ಕಾರ್ಯಕ್ರಮದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಖಜಾಂಚಿ ರಾಜಶ್ರೀ ಎಸ್. ನಟ್ಟೋಜ, ಸಂಸ್ಥೆಯ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಮತ್ತು ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top