ಕಾಸರಗೋಡು: ನಾಡೋಜ ಡಾ. ಕಯ್ಯಾರ ಕಿಞ್ಞಣ್ಣ ರೈ ಅವರ 111ನೇ ಜನ್ಮ ದಿನದ ಗೌರವ ನಮನ ಕಾರ್ಯಕ್ರಮವನ್ನು ಡಾ. ವಾಣಿಶ್ರೀ ಕಾಸರಗೋಡು ನೇತೃತ್ವದ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆ (ರಿ) ಕಾಸರಗೋಡು ಇವರ ವತಿಯಿಂದ ಪ್ರಕೃತಿ ಆಯುರ್ವೇದ ಚಿಕಿತ್ಸಾಲಯ ಶ್ರೀ ಗಿರಿ ಸದನ ಚೂರಿಪ್ಪಳ್ಳ ನೆಲ್ಲಿಕಟ್ಟೆ ಇಲ್ಲಿ ಜೂನ್ 11ರಂದು ಶಿವದುರ್ಗಾ ವೇದಿಕೆಯಲ್ಲಿ ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಲಾಯಿತು. ಇದೇ ಸಂದರ್ಭದಲ್ಲಿ ಸಂಸ್ಥೆಯ 223 ನೇ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಯಿತು.
ಸಂಸ್ಥೆಯ ಕೋಶಾಧಿಕಾರಿ ಡಾ. ವೆಂಕಟಗಿರೀಶ್ ಅವರು ಕಯ್ಯಾರ ಕಿಞ್ಞಣ್ಣ ರೈ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಿಞ್ಞಣ್ಣ ರೈಯವರ ಜೀವನ, ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿರುವ ಅದಮ್ಯ ಕೊಡುಗೆಗಳನ್ನು ಸ್ಮರಿಸಿಕೊಂಡರು. ಸಂಸ್ಥೆಯ ಉಪಾಧ್ಯಕ್ಷರಾದ ಶ್ರೀ ಅಚ್ಚುತ ಭಟ್ ಕವಿಯ ಕವನಗಳನ್ನು ವಾಚಿಸಿದರು. ಸ್ಥಳೀಯ ಕಲಾವಿದರಾದ ಸುಚಿತ್ರ, ಭವಿತ್, ಅಹಿಷ್, ಹರ್ಷಿತ್ ಶಿವರಾಮ್, ಕಣ್ಣನ್ ಲಕ್ಷ್ಮೀಶ್ ಮುಂತಾದವರು ಕವಿಯ ಸಾಹಿತ್ಯ ರಚನೆಗಳ ಗಾಯನ ಮತ್ತು ನೃತ್ಯ ಪ್ರದರ್ಶನವನ್ನು ನೀಡಿದರು.
ವೇದಿಕೆಯಲ್ಲಿ ಕಲಾವಿದರನ್ನು ಪುಸ್ತಕ ಹಾಗೂ ನೆನಪಿನ ಕಾಣಿಕೆಗಳನ್ನಿತ್ತು ಗೌರವಿಸಲಾಯಿತು. ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಡಾ. ವಾಣಿಶ್ರೀ ಕಾಸರಗೋಡು ಇವರು ಕಾರ್ಯಕ್ರಮವನ್ನು ನಿರೂಪಿಸಿ, ನಿರ್ವಹಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


