ಉಡುಪಿ: ಉಡುಪಿ ಜಿಲ್ಲಾ ಆಡಳಿತ ಉಡುಪಿ ಜಿಲ್ಲಾ ಪಂಚಾಯತ್ ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಉಡುಪಿ ರಕ್ತ ನಿಧಿ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ ಮುನಿಯಾಲ್ ಆಯುರ್ವೇದಿಕ್ ಕಾಲೇಜು ಉಡುಪಿ ಲಕ್ಷ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ವಯಂ ಪ್ರೇರಿತ ರಕ್ತದಾನಿಗಳ ದಿನಾಚರಣೆ ಮತ್ತು ಅತಿ ಹೆಚ್ಚು ರಕ್ತದಾನ ಮಾಡಿದ ರಕ್ತದಾನಿಗಳಿಗೆ ಗೌರವ ಸನ್ಮಾನ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜೂನ್ 15 ರಂದು ನಡೆಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಜಿ.ಹುಬ್ಬಳ್ಳಿ, ಉಡುಪಿ ಜಿಲ್ಲೆಯು ಇತರ ಜಿಲ್ಲೆಗಳಿಗೆ ರಕ್ತದಾನ ವಿಭಾಗದಲ್ಲಿ ಕೂಡ ಮಾದರಿಯಾಗಿದೆ. ರಕ್ತವನ್ನು ಯಾವುದೇ ಲ್ಯಾಬ್ ನಲ್ಲಿ ತಯಾರಿಸಲು ಸಾಧ್ಯವಿಲ್ಲ ಈ ನಿಟ್ಟಿನಲ್ಲಿ ರಕ್ತದಾನಿಗಳು ಅತಿ ಹೆಚ್ಚು ರಕ್ತದಾನ ಮಾಡುವುದರ ಮೂಲಕ ಆರೋಗ್ಯ ಮಾತ್ರವಲ್ಲ ಮತ್ತೊಬ್ಬರ ಆರೋಗ್ಯವನ್ನು ಕಾಪಾಡಬಹುದು ಎಂದರು.
ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸತ್ಯನಾರಾಯಣ ಬಿ ವಹಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು ಎಸ್ ವಿ, ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಕುಮಾರಿ, ಮುನಿಯಾಲ್ ಯೋಗ ಮತ್ತು ನ್ಯಾಚುರಪಥಿ ಕಾಲೇಜಿನ ಪ್ರಾಂಶುಪಾಲೆ ಡಾ. ಅಪರ್ಣ ಸುರೇಂದ್ರ ಲಯನ್ಸ್ ಕ್ಲಬ್ ಅಧ್ಯಕ್ಷೆ ತಾರಾ ಆಚಾರ್ಯ, ಮಹಾಬಲೇಶ್ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅತಿ ಹೆಚ್ಚು ರಕ್ತದಾನ ಮಾಡಿದ ಸಾಧಕರನ್ನು ಗೌರವಿಸಲಾಯಿತು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


