ಉಡುಪಿ ತಾಲೂಕು ಕಸಾಪ: ವನಮಹೋತ್ಸವ

Upayuktha
0



ಉಡುಪಿ: ನಮ್ಮ ಮನೆ ನಮ್ಮ ಮರ ತಂಡ ಕನ್ನಡ, ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ, ಶಿವರಾಮ ಕಾರಂತ ಟ್ರಸ್ಟ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಇಲಾಖೆಯ ಆವರಣದಲ್ಲಿ ವನಮಹೋತ್ಸವ ಮತ್ತು ಗಿಡ ವಿತರಣೆ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ಶಿವರಾಮ ಕಾರಂತರು ಪರಿಸರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಅವರೆಷ್ಟೋ ಪುಸ್ತಕಗಳು ಪರಿಸರಕ್ಕೆ ಪೂರಕವಾಗಿವೆ. ಈ ರೀತಿಯ ವನಮಹೋತ್ಸವ ಕಾರ್ಯಕ್ರಮಗಳಿಂದ ಪರಿಸರ ಬೆಳೆಯಲು ಸಾಧ್ಯ ಎಂದರು.


ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಈ ಪರಿಸರ ದಿನದ ಮೂಲಕ ಅತ್ಯುತ್ತಮ ಕಾರ್ಯ ಸಂಘಟಿಸಿದ ಎಲ್ಲಾ ಸಂಸ್ಥೆಗಳಿಗೆ ಅಭಿನಂದನೆ ತಿಳಿಸಿದರು.


ಉರಗ ತಜ್ಞ ಗುರುರಾಜ ಸನಿಲ್, ಒಂದು ಮರ ತನ್ನ ಆಯುಷ್ಯದಲ್ಲಿ ಸುಮಾರು ಅರವತ್ತು ಸಾವಿರ ಲೀಟರ್ ನೀರನ್ನು ಭೂಮಿಗೆ ಹಿಂಗಿಸಬಲ್ಲದು ಈ ಮೂಲಕ ಪರಿಸರ ಮತ್ತು ನೀರಿನ ಸಂರಕ್ಷಣೆ ಇದರಿಂದ ಸಾಧ್ಯ ಹೀಗಾಗಿ ಎಲ್ಲರೂ ಗಿಡ ಬೆಳೆಸುವ ಕಾರ್ಯ ಮಾಡಬೇಕಾಗಿದೆ ಎಂದರು.


ವೇದಿಕೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕ ಅಧ್ಯಕ್ಷ ರವಿರಾಜ್ ಎಚ್ ಪಿ, ಗೌರವ ಕಾರ್ಯದರ್ಶಿ ಜನಾದ೯ನ್‌ ಕೊಡವೂರು, ಮಣಿಪಾಲ್ ರೇಡಿಯೋ ನಿರ್ದೇಶಕಿ ಡಾ.ರಶ್ಮಿ ಅಮ್ಮೆಂಬಳ, ಕಸಾಪ ಉಡುಪಿ ತಾಲೂಕು ಪದಾಧಿಕಾರಿಗಳಾದ ರಂಜನಿ ವಸಂತ್ ಸತೀಶ್ ಕೊಡವೂರು ದೀಪ ಕರ್ಕಿ, ರಾಜೇಶ್ ಕೃಷ್ಣರಾಜ ತಂತ್ರಿಆಕ್ಸಿಸ್ ಲೈಫ್ ಇನ್ಸೂರೆನ್ಸ್ ಕಂಪನಿಯ ಜ್ಯೋತಿ ಶೇಟ್ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ತುಳಸಿ ಗಿಡಗಳನ್ನು ವಿತರಿಸಲಾಯಿತು. ರಾಘವೇಂದ್ರ ಕರ್ವಾಲು ನಿರೂಪಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top