ಸುಳ್ಯದ ಸ್ವರ್ಣಂ ಜ್ಯುವೆಲ್ಸ್ ವತಿಯಿಂದ ಜಾಲ್ಸೂರಿನ ಪಯಸ್ವಿನಿ ಪ್ರೌಢಶಾಲೆಯಲ್ಲಿ ವನಮಹೋತ್ಸವ

Upayuktha
0

ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ, ಸ್ಥಳದಲ್ಲೇ ರಸಪ್ರಶ್ನೆ ಸ್ಪರ್ಧೆ





ಸುಳ್ಯ: ಸ್ವರ್ಣಂ ಜ್ಯುವೆಲ್ಸ್ ಸುಳ್ಯ ವತಿಯಿಂದ ವಿಜಯ ಗ್ರಾಮಾಭಿವೃದ್ಧಿ ಸಮಿತಿ ಜಾಲ್ಸೂರು ಮತ್ತು ಕರ್ನಾಟಕ ಜರ್ನರ್ಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಘಟಕ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಹಣ್ಣಿನ ಗಿಡ ವಿತರಣೆ, ಸ್ಥಳದಲ್ಲೇ ರಸಪ್ರಶ್ನೆ ಸ್ಪರ್ಧಾ ಕಾರ್ಯಕ್ರಮ ಜಾಲ್ಸೂರು ಪಯಸ್ವಿನಿ ಪ್ರೌಢಶಾಲೆಯಲ್ಲಿ ಜೂ.8 ರಂದು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ವರ್ಣಂ ಜ್ಯುವೆಲ್ಸ್ ಪಾಲುದಾರ ಪ್ರವೀಣ್ ಬಿ. ಗೌಡ ವಹಿಸಿ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಶಾಲಾ ಸಂಚಾಲಕ ಸದಾನಂದ ಮಾವಜಿ, ಉಪ ವಲಯ ಅರಣ್ಯಾಧಿಕಾರಿ ರಂಜಿತಾ ಪಿ., ಜಾಲ್ಸೂರು ವಿಜಯ ಗ್ರಾಮಾಭಿವೃದ್ಧಿ ಸಮಿತಿ ಹಾಗೂ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷ ಯಶ್ವಿತ್ ಕಾಳಮ್ಮನೆ ಉಪಸ್ಥಿತರಿದ್ದು ಶುಭ ಹಾರೈಸಿದರು.


ಬಳಿಕ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ರಸಪ್ರಶ್ನೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಹಾಗೂ ಹಣ್ಣಿನ ಗಿಡ ವಿತರಿಸಲಾಯಿತು.  


ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿ ನಿರ್ದೇಶಕ ಗಂಗಾಧರ ಕಾಳಮ್ಮನೆ, ಗಸ್ತು ಅರಣ್ಯಪಾಲಕ ಖ್ಯಾತಲಿಂಗ ಎಸ್.ಕೆ, ಪಯಸ್ವಿನಿ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಜಯಲತಾ, ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಕಾರ್ಯದರ್ಶಿ ತಿರುಮಲೇಶ್ವರಿ ಅರ್ಭಡ್ಕ, ಪಯಸ್ವಿನಿ ಪ್ರೌಢಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ  ಚಂದ್ರಶೇಖರ ಉಪಸ್ಥಿತರಿದ್ದರು.


ಅತಿಥಿ ಗಣ್ಯರಿಗೆ ಹಸಿರು ಶಾಲು ಹೊದಿಸಿ ಸ್ವಾಗತಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಸ್ವರ್ಣಂ ಜ್ಯುವೆಲ್ಸ್ ಪಾಲುದಾರ ಸಂಜೀವ, ನಿತೀಶ್, ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಗೌರವಾಧ್ಯಕ್ಷೆ ಜಯಶ್ರೀ ಕೊಯಿಂಗೋಡಿ, ಕೆಜೆಯು ಕಾರ್ಯದರ್ಶಿ ಶ್ರೀಜಿತ್ ಸಂಪಾಜೆ, ವಿಜಯ ಗ್ರಾಮಾಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ಸುಮತಿ ಹುಲಿಮನೆ, ವಿಜಯ ಕಾಳಮ್ಮನೆ, ರಶ್ಮಿ ಕಾಳಮ್ಮನೆ ಜರ್ನಲಿಸ್ಟ್ ಯೂನಿಯನ್ ಸದಸ್ಯರಾದ ಕರುಣಾಕರ ಕೆಮ್ಮಾರ, ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಪೋಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಗಣೇಶ್ ಕುಕ್ಕುದಡಿ ಸ್ವಾಗತಿಸಿ, ಶಿವಪ್ರಸಾದ್ ಆಲೆಟ್ಟಿ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಶಾಲಾ ವಠಾರದಲ್ಲಿ ಸಾಂಕೇತಿಕವಾಗಿ ಹಣ್ಣಿನ ಗಿಡವನ್ನು ನೆಡಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top