ವಿದ್ವತ್ ಕಾಲೇಜು: ವಿದ್ಯಾರ್ಥಿಗಳಿಂದ ಯೋಗ ದಿನಾಚರಣೆ

Upayuktha
0


ಬೆಳ್ತಂಗಡಿ: ಯೋಗವು ನಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮಹತ್ವದ ಸಾಧನವಾಗಿದೆ. ನಿಯಮಿತ ಯೋಗಾಭ್ಯಾಸದಿಂದ ದೇಹದ ಲವಲವಿಕೆ ಹೆಚ್ಚುತ್ತದೆ ಎಂದು ನ್ಯಾಚುರೋಪತಿ ವೈದ್ಯಕೀಯ ಅಧಿಕಾರಿ ಡಾ.ರಿಶಿಕಾ ರೈ ಹೇಳಿದರು.


ಜೂ.21 ಅಂತಾರಾಷ್ಟ್ರೀಯ ಯೋಗದಿನಾಚರಣೆ ಭಾಗವಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ಯೋಗವು ನಮ್ಮ ಒತ್ತಡ ನಿಯಂತ್ರಣ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಿ ಆರೋಗ್ಯಕರ ಜೀವನಶೈಲಿಯನ್ನು ರೂಪಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.


ಬಳಿಕ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ನಡೆಸಿಕೊಟ್ಟರು.


ಈ ವೇಳೆ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ, ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ್ ಇ.ಎಂ. ಪ್ರಾಂಶುಪಾಲರಾದ ಬಾಲಕೃಷ್ಣ ನಾಯ್ಕ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top