ವಿವೇಕಾನಂದ ಸ್ವಾಯತ್ತ ಕಾಲೇಜಿನ ಪದವಿ ಪರೀಕ್ಷಾ ಫಲಿತಾಂಶ ಪ್ರಕಟ

Upayuktha
0

ಬಿಬಿಎ ಆರನೇ ಸೆಮಿಸ್ಟರ್‌ನಲ್ಲಿ ಶೇ.100 ಫಲಿತಾಂಶ


ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಮೇ–ಜೂನ್ 2026ರಲ್ಲಿ ನಡೆದ ಪದವಿ ತರಗತಿಗಳ ಎರಡನೆಯ, ನಾಲ್ಕನೆಯ ಮತ್ತು ಆರನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವು ಪ್ರಕಟಗೊಂಡಿದೆ. ವಿದ್ಯಾರ್ಥಿಗಳು ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ಹಾಕಿ ಫಲಿತಾಂಶಗಳನ್ನು ಪರಿಶೀಲಿಸಬಹುದು. 


ಆರನೇ ಸೆಮಿಸ್ಟರ್‌ನ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಬಿಬಿಎ) ಶೇ 100, ಬ್ಯಾಚುಲರ್ ಆಫ್ ಆರ್ಟ್ಸ್ (ಬಿಎ) ಶೇ 98.77, ಬ್ಯಾಚುಲರ್ ಆಫ್ ಕಾಮರ್ಸ್ (ಬಿಕಾಂ) ಶೇ 97.97, ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್ಸ್ (ಬಿಸಿಎ) ಶೇ 95.08 ಹಾಗೂ ಬ್ಯಾಚುಲರ್ ಆಫ್ ಸೈನ್ಸ್ (ಬಿಎಸ್ಸಿ) ಶೇ 95.00 ಫಲಿತಾಂಶ ದಾಖಲಾಗಿದೆ.


ಆರನೇ ಸೆಮಿಸ್ಟರ್ ಬಿಬಿಎಯಲ್ಲಿ ಪರೀಕ್ಷೆಗೆ ಹಾಜರಾದ ಎಲ್ಲಾ 53 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 100 ಫಲಿತಾಂಶ ಸಾಧಿಸಿದ್ದಾರೆ. ಅದೇ ರೀತಿ ಬಿಎಯಲ್ಲಿ ಪರೀಕ್ಷೆಗೆ ಹಾಜರಾದ 81 ವಿದ್ಯಾರ್ಥಿಗಳ ಪೈಕಿ 80 ವಿದ್ಯಾರ್ಥಿಗಳು, ಬಿಕಾಂನಲ್ಲಿ 197 ವಿದ್ಯಾರ್ಥಿಗಳ ಪೈಕಿ 193 ವಿದ್ಯಾರ್ಥಿಗಳು, ಬಿಸಿಎಯಲ್ಲಿ 264 ವಿದ್ಯಾರ್ಥಿಗಳ ಪೈಕಿ 251 ವಿದ್ಯಾರ್ಥಿಗಳು ಹಾಗೂ ಬಿಎಸ್ಸಿಯಲ್ಲಿ 60 ವಿದ್ಯಾರ್ಥಿಗಳ ಪೈಕಿ 57 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಚಾರ್ಯರಾದ  ಶ್ರೀಕೃಷ್ಣ ಗಣರಾಜ ಭಟ್ ಮತ್ತು ಕುಲಸಚಿವರಾದ ಪ್ರಕಾಶ್ ಕುಮಾರ್ ಪಿ. ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top