ವಿವೇಕಾನಂದ ಕಾಲೇಜು: ಜೂ. 27 ರಂದು “ಬಿಲ್ಡ್ ವಿತ್ ಎಐ” ಬೂಟ್‌ಕ್ಯಾಂಪ್

Upayuktha
0


ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ(ಸ್ವಾಯತ್ತ) ಮಹಾವಿದ್ಯಾಲಯ ಇದರ ಗಣಕ ಶಾಸ್ತ್ರ ವಿಭಾಗ ಹಾಗೂ ಗೂಗಲ್ ಡೆವಲಪರ್ ಗ್ರೂಪ್ ಆನ್ ಕ್ಯಾಂಪಸ್ (GDG on Campus) ವತಿಯಿಂದ, ಹ್ಯಾಕ್2ಸ್ಕಿಲ್ ಸಹಯೋಗದಲ್ಲಿ, ವಿದ್ಯಾರ್ಥಿಗಳಿಗಾಗಿ ವಿಶೇಷ "ಬಿಲ್ಡ್ ವಿತ್ ಎಐ ಬೂಟ್‌ಕ್ಯಾಂಪ್” ಅನ್ನು  ಜೂ. 27ರಂದು ಪದವಿ ಕಾಲೇಜಿನ ಸುವರ್ಣ ಮಹೋತ್ಸವ ಸಭಾಭವನದಲ್ಲಿ   ಆಯೋಜಿಸಲಾಗಿದೆ.


ಕೃತಕ ಬುದ್ಧಿಮತ್ತೆ ಮತ್ತು ಕ್ಲೌಡ್ ತಂತ್ರಜ್ಞಾನಗಳ ಪ್ರಾಯೋಗಿಕ ಜ್ಞಾನವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಗೂಗಲ್ ಡೆವಲಪರ್ ಎಕ್ಸ್‌ಪರ್ಟ್‌ಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ತಾಂತ್ರಿಕ ವಿಷಯಗಳ ಕುರಿತು ಮಾರ್ಗದರ್ಶನ ನೀಡುವುದರ ಜೊತೆಗೆ ಪ್ರಾಯೋಗಿಕ ಕಾರ್ಯಾಗಾರಗಳನ್ನು ನಡೆಸಲಿದ್ದಾರೆ. ಕೃತಕ ಬುದ್ಧಿಮತ್ತೆಯ ನೈಜ ಬಳಕೆಗಳು, ಕ್ಲೌಡ್ ತಂತ್ರಜ್ಞಾನ, ನವೀನ ತಂತ್ರಾಂಶ ಪರಿಕಲ್ಪನೆಗಳು ಹಾಗೂ ಅವುಗಳ ಅನ್ವಯಿಕತೆಯ ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.


ಬೂಟ್‌ಕ್ಯಾಂಪ್ ಎರಡು ಅವಧಿಗಳಲ್ಲಿ ನಡೆಯಲಿದೆ. ಮೊದಲ ಅವಧಿ ಕಾಲೇಜಿನ ಆಂತರಿಕ ವಿದ್ಯಾರ್ಥಿಗಳಿಗಾಗಿ ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಬೆಳಿಗ್ಗೆ 9.00ರಿಂದ 9.45ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸುಮಾರು 200ರಿಂದ 250 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.


ಎರಡನೇ ಅವಧಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಇತರ ಶಿಕ್ಷಣ ಸಂಸ್ಥೆಗಳ ಆಸಕ್ತ ವಿದ್ಯಾರ್ಥಿಗಳಿಗಾಗಿ ಮಧ್ಯಾಹ್ನ 3.00ರಿಂದ ಸಂಜೆ 6.00ರವರೆಗೆ ನಡೆಯಲಿದೆ. ನೋಂದಣಿ ಪ್ರಕ್ರಿಯೆ ಮಧ್ಯಾಹ್ನ 2.00ರಿಂದ 2.45ರವರೆಗೆ ನಡೆಯಲಿದ್ದು, ಸುಮಾರು 200ರಿಂದ 250 ವಿದ್ಯಾರ್ಥಿಗಳು ಭಾಗವಹಿಸುವ ನಿರೀಕ್ಷೆಯಿದೆ.


ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಕ್ಲೌಡ್ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಪ್ರಾಯೋಗಿಕ ಅನುಭವ ಒದಗಿಸುವುದರೊಂದಿಗೆ, ನವೀನ ಆಲೋಚನೆ, ತಾಂತ್ರಿಕ ಕೌಶಲ್ಯ ಮತ್ತು ಉದ್ಯಮಮುಖಿ ಜ್ಞಾನವನ್ನು ಬೆಳೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.


ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ ಅಗತ್ಯ ತಾಂತ್ರಿಕ ವ್ಯವಸ್ಥೆ, ವೇದಿಕೆ ನಿರ್ವಹಣೆ, ಬ್ರ್ಯಾಂಡಿಂಗ್ ಮತ್ತು ವಿದ್ಯಾರ್ಥಿ ಸ್ವಯಂಸೇವಕರ ಸಹಕಾರವನ್ನು ಕಲ್ಪಿಸಲಾಗಿದೆ. ಈ ಬೂಟ್‌ಕ್ಯಾಂಪ್ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳನ್ನು ಅರಿಯಲು ಹಾಗೂ ತಜ್ಞರೊಂದಿಗೆ ನೇರವಾಗಿ ಸಂವಾದ ನಡೆಸಲು ಉತ್ತಮ ಅವಕಾಶವಾಗಲಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top