ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ವಿಭಾಗಕ್ಕೆ ಶೇ.100 ಫಲಿತಾಂಶ

Upayuktha
0

 


ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ), ಮಹಾವಿದ್ಯಾಲಯ ಇದರ ಸ್ನಾತಕೋತ್ತರ ವಿಭಾಗವು 2026ರ ಮೇ ತಿಂಗಳ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಕಾಲೇಜಿನ ಎಂ.ಕಾಂ (M.Com), ಎಂ.ಎ. ಪತ್ರಿಕೋದ್ಯಮ (M.A. Journalism) ಹಾಗೂ ಎಂಎಸ್‌ಸಿ ಇಂಡಸ್ಟ್ರಿಯಲ್ ಕೆಮಿಸ್ಟ್ರಿ (M.Sc. Industrial Chemistry) ವಿಭಾಗಗಳು ಶೇ.100 ಫಲಿತಾಂಶ ದಾಖಲಿಸಿದೆ.


ಈ ಪರೀಕ್ಷಾ ಫಲಿತಾಂಶವನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಶ್ರೀಕೃಷ್ಣ ಗಣರಾಜ ಭಟ್ ಹಾಗೂ ಪರೀಕ್ಷಾಂಗದ ಕುಲಸಚಿವ ಪ್ರೊ.ಪ್ರಕಾಶ್ ಕುಮಾರ್ ಪಿ ಜಂಟಿಯಾಗಿ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪರೀಕ್ಷಾಂಗ, ಸ್ನಾತಕೋತ್ತರ ವಿಭಾಗದ ಸಂಯೋಜಕರು ಹಾಗೂ ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.


ವಿದ್ಯಾರ್ಥಿಗಳ ಪರಿಶ್ರಮ, ಉಪನ್ಯಾಸಕರ ಸಮರ್ಪಕ ಮಾರ್ಗದರ್ಶನ ಹಾಗೂ ಕಾಲೇಜಿನ ಗುಣಮಟ್ಟದ ಶಿಕ್ಷಣ ವ್ಯವಸ್ಥೆಯೇ ಈ ಶೇ.100 ಫಲಿತಾಂಶ ದಾಖಲಿಸಲು ಕಾರಣವಾಗಿದೆ ಎಂದು ಕಾಲೇಜು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top