ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ "ವಿವೇಕ ನೈಪುಣ್ಯ"

Upayuktha
0

ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು  ಡಾ. ವಿರೂಪಾಕ್ಷ ದೇವರಮನೆ ಇವರಿಂದ ಉಪನ್ಯಾಸಕರಿಗಾಗಿ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಉಪನ್ಯಾಸಕರಿಗಾಗಿ ಒಂದು ದಿನದ ಮಾಹಿತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ  ಡಾ. ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ ಇಲ್ಲಿನ ಖ್ಯಾತ ಮನೋವೈದ್ಯ ಹಾಗೂ ಲೇಖಕರಾದ ಡಾ.ವಿರೂಪಾಕ್ಷ ದೇವರಮನೆ ಭಾಗವಹಿಸಿದರು. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕುರಿತು ಮಾಹಿತಿ ನೀಡಿದ ಅವರು, ಹದಿಹರೆಯದ ವಿದ್ಯಾರ್ಥಿಗಳು ಎದುರಿಸುವ ಹಲವಾರು ಸಮಸ್ಯೆಗಳು ಹಾಗೂ ಪರಿಹಾರ, ಈ ಹಂತದಲ್ಲಿ  ಸಹಜವಾಗಿ ನಡೆಯುವ ಹಾರ್ಮೋನ್ ಬದಲಾವಣೆಗಳು, ಸಮಸ್ಯಾತ್ಮಕ ಮಗುವಿನೊಂದಿಗೆ ಒಬ್ಬ ಶಿಕ್ಷಕ ನಡೆದುಕೊಳ್ಳಬೇಕಾದ ನಡವಳಿಕೆ ಈ ಮುಂತಾದ ವಿಷಯಗಳ ಕುರಿತು ವಿಶೇಷ ಮಾಹಿತಿಗಳನ್ನು ನೀಡಿದರು.   


ಕಾರ್ಯಾಗಾರದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ವೆಂಕಟ್ರಮಣ ರಾವ್ ಮಂಕುಡೆ,  ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್.  ಹಾಗೂ ವಿವೇಕಾನಂದ  ವಿದ್ಯಾಸಂಸ್ಥೆಗಳ  ಅಧ್ಯಾಪಕ ವೃಂದದವರು ಭಾಗಿಯಾದರು.  ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಡಾ.ಶ್ರುತಿ ಎಂ.ಎಸ್ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು. 


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top