ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಪ್ರಾರಂಭೋತ್ಸವದ ಅಂಗವಾಗಿ ಗಣಪತಿ ಹವನ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಶೆಕೋಡಿ ಸೂರ್ಯನಾರಾಯಣ ಭಟ್, ಹರಿಪ್ರಸಾದ್, ಪ್ರಕಾಶ್ ಹಾಗೂ ಅನಂತ ಭಟ್ ಇವರುಗಳು ಪೂಜೆಯನ್ನು ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಸಂಸ್ಥೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ, ನಿರ್ದೇಶಕರಾದ ವತ್ಸಲಾ ರಾಜ್ಞಿ , ಡಾ. ಕೃಷ್ಣಪ್ರಸನ್ನ , ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

.png)
