ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ʼಮಾನಸಿಕ ಆರೋಗ್ಯಹಾಗೂ ಜೀವನ ಕೌಶಲ್ಯಗಳುʼ ಕುರಿತಾದ ಉಪನ್ಯಾಸ ಕಾರ್ಯಕ್ರಮ

Upayuktha
0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆರೋಗ್ಯ ಹಾಗೂ ನೈರ್ಮಲ್ಯದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ʼಮಾನಸಿಕ ಆರೋಗ್ಯಹಾಗೂ ಜೀವನ ಕೌಶಲ್ಯಗಳುʼವಿಷಯದ ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನುಹಮ್ಮಿಕೊಳ್ಳಲಾಯಿತು. ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಸಂದೀಪ್ ಎಚ್.ಎಸ್, ಮಕ್ಕಳ ತಜ್ಞರು, ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳಿಗಾಗಿ ಅವಧಿಯನ್ನು ನಡೆಸಿಕೊಟ್ಟರು. ನೇತಾಜಿ ಸಭಾಭವನದಲ್ಲಿ ವಿದ್ಯಾರ್ಥಿನಿಯರಿಗಾಗಿ ನಡೆದ ಅವಧಿಯಲ್ಲಿ  ಸಂಪನ್ಮೂಲ ವ್ಯಕ್ತಿಗಳಾದ ಡಾ. ಅನನ್ಯಲಕ್ಷ್ಮೀ, ವೈದ್ಯರು, ಪ್ರಗತಿ ಆಸ್ಪತ್ರೆ ಪುತ್ತೂರು, ಇವರು ದೈಹಿಕ ಆರೋಗ್ಯ ಹಾಗೂ ನೈರ್ಮಲ್ಯದ ಜೊತೆಗೆ ಮಾನಸಿಕ ಸ್ವಾಸ್ಥ್ಯದ ಅಗತ್ಯತೆಯನ್ನು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಜೀವನದಲ್ಲಿ ಎದುರಾಗುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು, ನಿರ್ಧಾರ ತೆಗೆದುಕೊಳ್ಳುವಿಕೆ, ಸೃಜನಶೀಲ ಚಿಂತನೆ ಹಾಗೂ ವಿಮರ್ಶಾತ್ಮಕ ಚಿಂತನೆಗಳ ಮಹತ್ವವನ್ನು ವಿವಿಧ ಕಥೆ ಹಾಗೂ ಚಟುವಟಿಕೆಗಳ ಮೂಲಕ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ತಿಳಿಹೇಳಿದರು. 


ಎರಡು ಪ್ರತ್ಯೇಕ ಅವಧಿಗಳಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿಯರಾದ ಚೈತ್ರ ಯು ಎನ್ ಹಾಗೂ ಪುಷ್ಪಲತಾ ಉಪಸ್ಥಿತರಿದ್ಧರು.  


ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕಿಯರು, ಪ್ರಥಮ ಪಿಯುಸಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡರು. ಉಪನ್ಯಾಸಕಿಯರಾದ ಮಮತಾ ಶೆಟ್ಟಿ  ಹಾಗೂ  ದಯಾಮಣಿ ಟಿ. ಕೆ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.    


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top