"ವಿವೇಕ ಸಂಕಲ್ಪ – 2026": ಪೋಷಕರ ಸಮಾವೇಶ ಹಾಗೂ ಕಾಲೇಜು ಪ್ರಾರಂಭೋತ್ಸವ

Upayuktha
0

 ಖ್ಯಾತ ಮನೋವೈದ್ಯ ಡಾ. ವಿರೂಪಾಕ್ಷ ದೇವರಮನೆ ಅವರಿಂದ ವಿಶೇಷ ಅವಧಿಗಳು, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ


ಪುತ್ತೂರು: 2026-27 ನೇ ಸಾಲಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳ ವಿದ್ಯಾರ್ಥಿ-ಪೋಷಕರ ಸಮಾವೇಶವಿವೇಕ ಸಂಕಲ್ಪ – 2026” ಎಂಬ ಶೀರ್ಷಿಕೆಯೊಂದಿಗೆ ಜೂನ್ 4 ರಂದು ಹಾಗೂ ಜೂನ್ 5 ರಂದು ನಡೆಯಲಿದೆ.

 

ವಿಜ್ಞಾನ ವಿಭಾಗದ ಪೋಷಕರ ಸಭೆ ಹಾಗೂ ಕಾಲೇಜು ಪ್ರಾರಂಭೋತ್ಸವ

ಜೂನ್ 4 ರಂದು ಕಾಲೇಜು ಆವರಣದ ಕೇಶವ ಸಂಕಲ್ಪ ಸಭಾಭವನದಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ವಿಜ್ಞಾನ ವಿಭಾಗದ ಪೋಷಕರ ಸಭೆ ನಡೆಯಲಿದ್ದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ. ಪಿ. ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ  ನಿರ್ದೇಶಕರಾದ ಡಾ.ಕೆ. ಎನ್. ಸುಬ್ರಹ್ಮಣ್ಯ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಡುಪಿಯ ಡಾ. . ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಖ್ಯಾತ ಮನೋವೈದ್ಯರು ಹಾಗೂ ಲೇಖಕರಾದ ಡಾ. ವಿರೂಪಾಕ್ಷ ದೇವರಮನೆ ಅವರು ಭಾಗವಹಿಸಿ ಪೋಷಕರಿಗೆ "ಸುಗಮ ಪಾಲನೆಗೆ ಹೊಸ ತಲೆಮಾರಿನ ಸವಾಲುಗಳು" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಜ್ಞಾನ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ.

 

ವಾಣಿಜ್ಯ ಹಾಗೂ ಕಲಾ ವಿಭಾಗದ ಪೋಷಕರ ಸಭೆ ಹಾಗೂ ಕಾಲೇಜು ಪ್ರಾರಂಭೋತ್ಸವ

ಜೂನ್ 5 ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸರಿಯಾಗಿ ಕಲಾ ಹಾಗೂ ವಾಣಿಜ್ಯ ವಿಭಾಗದ ಪೋಷಕರ ಸಭೆ ನಡೆಯಲಿದ್ದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ. ಪಿ. ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಸಚಿನ್ ಶೆಣೈ ಕೆ. ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಖ್ಯಾತ ಮನೋವೈದ್ಯರು ಹಾಗೂ ಲೇಖಕರಾದ ಡಾ. ವಿರೂಪಾಕ್ಷ ದೇವರಮನೆ ಅವರು ಭಾಗವಹಿಸಿ ಪೋಷಕರಿಗೆ "ಪೋಷಕರು ಹಾಗೂ ಮಕ್ಕಳ ಮಧ್ಯೆ ಮನೋವಿಜ್ಞಾನದ ಸತ್ಯಗಳು" ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ ನಡೆಯಲಿದೆ. ಕಾರ್ಯಕ್ರಮದಲ್ಲಿ ವಾಣಿಜ್ಯ ಹಾಗೂ ಕಲಾ ವಿಭಾಗದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ.

 

ಸರಸ್ವತಿ ಪೂಜೆ

ಕಾಲೇಜು ಪ್ರಾರಂಭೋತ್ಸವದ ಪ್ರಯುಕ್ತ ಜೂನ್ 6 ರಂದು ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ ಬೆಳಗ್ಗೆ 7.30 ರಿಂದ ಸರಸ್ವತಿ ಪೂಜೆ ನಡೆಯಲಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ  ಜೂನ್ 5 ಹಾಗೂ  ವಾಣಿಜ್ಯ ಹಾಗೂ ಕಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ಜೂನ್ 6 ರಿಂದ ತರಗತಿಗಳು ಮುಂದುವರಿಯಲಿವೆ.

 

ಕಾರ್ಯಕ್ರಮಗಳಲ್ಲಿ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್, ಪೋಷಕರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

 

 

Post a Comment

0 Comments
Post a Comment (0)
To Top