ಪರಿಸರ ಸಂರಕ್ಷಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯ: ನಿತ್ಯಾನಂದ ವಿ. ಗಾಂವಕರ

Upayuktha
0


ತೆಂಕನಿಡಿಯೂರು: “ವಿಶ್ವಸಂಸ್ಥೆಯ ಮುಂದಾಳತ್ವದಲ್ಲಿ ಆರಂಭವಾದ ವಿಶ್ವ ಪರಿಸರ ದಿನಾಚರಣೆಯು ಇಂದು ಜಗತ್ತಿನಾದ್ಯಂತ ಪರಿಸರದ ಬಗ್ಗೆ ಕಾಳಜಿ ವಹಿಸಲು ಜನರನ್ನು ಪ್ರೇರೇಪಿಸುವ ಮಹತ್ವದ ವೇದಿಕೆಯಾಗಿದೆ.


ಮಾನವ ತನ್ನ ಅನುಕೂಲಕ್ಕೆ ತಕ್ಕಂತೆ ಪರಿಸರವನ್ನುಮಿತಿ ಮೀರಿ ಬಳಸಿಕೊಂಡ ಕಾರಣಕ್ಕೆ ಇಂದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ, ಪ್ರವಾಹ, ಬರ ಹಾಗೂ ಇತರ ಪ್ರಕೃತಿ ವಿಕೋಪಗಳಿಗೆ ಸಾಕ್ಷಿಯಾಗುತ್ತಿದ್ದು ಪರಿಸರ ಸಮತೋಲನ ಹದಗೆಡುತ್ತಿದೆ. ವಿದ್ಯಾರ್ಥಿಗಳಾದ ನೀವು ಜವಾಬ್ದಾರಿಯನ್ನು ವಹಿಸಿಕೊಂಡು, ಸಸಿ ನೆಟ್ಟು ಪೋಷಿಸಬೇಕು, ಪರಿಸರ ಸ್ವಚ್ಛತೆಯನ್ನು ಕಾಪಾಡಿ, ಪ್ಲಾಸ್ಟಿಕ್‌ ಬಳಕೆಯನ್ನು ಕಡಿಮೆ ಮಾಡಬೇಕು” ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರಿನ ಪ್ರಾಂಶುಪಾಲ ನಿತ್ಯಾನಂದ ವಿ ಗಾಂವಕರ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ಕಾಲೇಜಿನಲ್ಲಿ ಐಕ್ಯುಎಸಿ, ಅಭ್ಯದಯ ಸಮಾಜಕಾರ್ಯ ವೇದಿಕೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು ಮತ್ತು ಕಾಲೇಜು ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.


ಈ ಕಾರ್ಯಕ್ರಮದಲ್ಲಿ ಡಾ ಜಿ.ಶಂಕರ್‌ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇಲ್ಲಿನ ಪ್ರಾಂಶುಪಾಲ ಡಾ.ಸೋಜನ್‌ ಕೆ ಜಿ, ಕಾಲೇಜಿನ ಸಮಾಜಕಾರ್ಯ ವಿಭಾಗದ ಮುಖ್ಯಸ್ಥರಾದ  ಸುಷ್ಮಾ ಟಿ, ರುಖಿಯತ್‌, ಐಕ್ಯುಎಸಿ ಸಂಚಾಲಕರಾದ ಡಾ. ವಿಷ್ಣುಮೂರ್ತಿ ಪ್ರಭು, ಎನ್.ಎಸ್.ಎಸ್‌ ಅಧಿಕಾರಿಗಳಾದ ಪ್ರಸಾದ್‌ ಎಚ್.ಎಂ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಸಮಾಜಕಾರ್ಯ ವಿಭಾಗದ ಉಪನ್ಯಾಸಕರಾದ ಡಾ. ಗಣೇಶ್‌ ಪ್ರಸಾದ್‌ ಜಿ ನಾಯಕ್‌ ಕಾರ್ಯಕ್ರಮ ನಿರೂಪಿಸಿದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top