ಸುದಾನ ಶಾಲೆಯಲ್ಲಿ‌ ವಿಶ್ವ ಪರಿಸರ ದಿನಾಚರಣೆ

Upayuktha
0

ಪುತ್ತೂರು: ಪುತ್ತೂರಿನ ಸುದಾನ ವಸತಿ‌ ಶಾಲೆಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ವಿದ್ಯಾರ್ಥಿನಿ ತನ್ವಿ‌ ಎಂ ಪರಿಸರದ ದಿನದ ಮಹತ್ವವನ್ನು ತಿಳಿಸುತ್ತಾ "ಮಾನವನಿಂದಾಗಿ ಪರಿಸರವು ಬಹಳ ಹಾನಿಗೆ ಒಳಗಾಗುತ್ತಿದೆ. ಬದುಕಿನಲ್ಲಿ ಪರಿಸರದ ಪ್ರಾಮುಖ್ಯತೆಯನ್ನು ಅರಿತು ಸಂರಕ್ಷಿಸಿದರೆ ಜಗತ್ತು ನೆಮ್ಮದಿಯಿಂದ ಇರಬಲ್ಲುದು" ಎಂದು ಅಭಿಪ್ರಾಯ ಪಟ್ಟರು. ಪ್ರೌಢಶಾಲಾ ವಿದ್ಯಾರ್ಥಿಗಳು‌ ಪರಿಸರ ಗೀತೆಯನ್ನು ಹಾಡಿದರು. ಪೂರ್ವ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಹಸಿರಿನ ಮಹತ್ವವನ್ನು ತಿಳಿಸುವ ಮೆರವಣಿಗೆಯನ್ನು ಶಾಲಾ ಆವರಣದಲ್ಲಿ‌ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿ ವಿಕಾಸ್ ರಾಥೊಡ್ ಕಾರ್ಯಕ್ರಮವನ್ನು ನಿರೂಪಿಸಿದರು. ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ಮತ್ತು ವಿಜ್ಞಾನ ಶಿಕ್ಷಕರು ಉಪಸ್ಥಿತರಿದ್ದರು. ಶಾಲಾ ವಿಜ್ಞಾನ ಸಂಘ ಅವನಿ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top