ಗಿಡ ನೆಟ್ಟ ಪ್ರಥಮ ಪಿಯು ವಿದ್ಯಾರ್ಥಿಗಳು
ಬೆಳ್ತಂಗಡಿ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಜೂ.5 ರಂದು ವಿದ್ವತ್ ಪಿ.ಯು. ಕಾಲೇಜು, ಗುರುವಾಯನಕೆರೆಯಲ್ಲಿ ಪ್ರಥಮ ಪಿಯುಸಿ ವಿದ್ಯಸರ್ಥಿಗಳಿಂದ ಕಾಲೇಜು ಆವರಣದಲ್ಲಿ ಹೂ ಹಾಗೂ ಹಣ್ಣಿನ ಗಿಡ ನೆಡುವ ಮೂಲಕ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ವತ್ ಕಾಲೇಜಿನ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಪರಿಸರವು ನಮ್ಮ ಜೀವನಾಡಿ; ಅದನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಒಂದು ಮರ ನೆಡುವ ಮೂಲಕ ಪ್ರಕೃತಿಗೆ ಕೃತಜ್ಞತೆ ಸಲ್ಲಿಸಿ, ಹಸಿರು ಭವಿಷ್ಯವನ್ನು ನಿರ್ಮಿಸೋಣ ಎಂದರು.
ಇಂದಿನ ಪರಿಸರ ಸಂರಕ್ಷಣೆ, ನಾಳಿನ ಸುಂದರ ಬದುಕಿನ ಭದ್ರತೆಯಾಗಿದೆ. ಪರಿಸರ ದಿನದಂದು ಪ್ರತಿಯೊಬ್ಬರೂ ಒಂದು ಮರ ನೆಟ್ಟು ಭೂಮಾತೆಯ ಋಣ ತೀರಿಸೋಣ ಎಂದು ವಿದ್ಯಾರ್ಥಿಗಳಿಗೆ ಸಂದೇಶ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಹಾಗೂ ತನ್ನ ಹುಟ್ಟುಹಬ್ಬದ ಪ್ರಯುಕ್ತ ಕಾಲೇಜಿನ ಸಾಮಾಜಿಕ ಕಳಕಳಿಯ ಭಾಗವಾಗಿ ದ್ವಿತೀಯ ಪಿಯುಸಿ ನೀಟ್ ಎ ವಿಭಾಗದ ಸಾಮ್ರಾಟ್ ಶ್ರೀಧ ಎಸ್.ಪಿ. ಅವರ ಹೆಸರಲ್ಲಿ ಹೂವಿನ ಹಾಗೂ ಹಣ್ಣಿನ ಗಿಡ ನೆಡಲಾಯಿತು.
ಈ ವೇಳೆ ಸಂಸ್ಥೆಯ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ್ ಇ.ಮಂಡಗಳಲೆ, ಪ್ರಾಂಶುಪಾಲರಾದ ಬಾಲಕೃಷ್ಣ ನಾಯ್ಕ್, ಆಡಳಿತಾಧಿಕಾರಿ ಅಶೋಕ್ ಶೆಟ್ಟಿ, ಉಪನ್ಯಾಸಕರು, ವಿವಿಧ ವಿಭಾಗದ ಮುಖ್ಯಸ್ಥರು, ವಿದ್ಯಾರ್ಥಿಗಳು ಭಾಗವಹಿಸಿದರು.
ವಿದ್ವತ್ ಇಕೊ ಕ್ಲಬ್ ನ ಸಂಚಾಲಕ ರಾಕೇಶ್ ಕಾರ್ಯಕ್ರಮ ಸಂಯೋಜಿಸಿದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


