ಕಾರಂತರ ನೆನಪಿನಲ್ಲಿ ಪರಿಸರ ದಿನಾಚರಣೆ

Upayuktha
0

ಉಡುಪಿ: ಡಾ.ಶಿವರಾಮ ಕಾರಂತರು ತಮ್ಮ ಕೃತಿಗಳಲ್ಲಿ ಕರಾವಳಿಯ ಪರಿಸರದ ಮಹತ್ವವನ್ನು ಸಾರಿದ್ದಾರೆ. ಪರಿಸರದ ಕುರಿತಾದ ಅವರ ಕಾಳಜಿಯು ಯುವ ಜನಾಂಗಕ್ಕೆ ಮಾರ್ಗದರ್ಶಕವಾಗಿದೆ. ಮಕ್ಕಳಲ್ಲಿ ಪರಿಸರ ಪ್ರಜ್ಞೆಯನ್ನು ಬೆಳೆಸುವ ಕಾರ್ಯವನ್ನು ಅವರು ನಡೆಸಿದ್ದಾರೆ. ಈ ದೃಷ್ಟಿಯಿಂದ ಅವರ ನೆನಪಿನಲ್ಲಿ ಪರಿಸರ ದಿನಾಚರಣೆಯನ್ನು ನಡೆಸುವುದು ಅರ್ಥಪೂರ್ಣ ಎಂದು ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು ಹೇಳಿದರು.


ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ, ನಮ್ಮ ಮನೆ ನಮ್ಮ ಮರ ಅಭಿಯಾನ ತಂಡ, ಕನ್ನಡ ಸಾಹಿತ್ಯ ಪರಿಷತ್ತುಸಹಭಾಗಿತ್ವದಲ್ಲಿ ಅಲೆವೂರಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಛೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಡೆದ ಕಾರಂತರ ನೆನಪಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.


ಮುಖ್ಯ ಅತಿಥಿಗಳಾಗಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್, ಪರಿಸರವು ಮಾನವ ಬದುಕಿನ ಜೀವ ದಾತುವಾಗಿದೆ. ಇದನ್ನು ಅರ್ಥ ಮಾಡಿಕೊಂಡರೆ ಪರಿಸರ ರಕ್ಷಣೆ ಸುಲಭ ಎಂದರು. ಉಡುಪಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರವಿರಾಜ್ ಎಚ್.ಪಿ ಪ್ರಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಶುಭ ಹಾರೈಸಿದರು.


ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಜನಾರ್ಧನ ಕೊಡವೂರು, ರಂಜಿನಿ ವಸಂತ್, ಸದಸ್ಯೆ ದೀಪಾ ಕರ್ಕಿ, ಮಣಿಪಾಲ ರೇಡಿಯೋದ ಡಾ.ರಶ್ಮಿ ಅಮ್ಮೆಂಬಳ, ಆಕ್ಸಿಸ್ ಬ್ಯಾಂಕ್‍ನ ಜ್ಯೋತಿ ಶೆಟ್, ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಸತೀಶ್ ಕೊಡವೂರು, ಮೋಲ್ಟೋ ಕ್ಯಾರ್ ನ ಕೆ.ಆರ್ ತಂತ್ರಿ, ಮೊದಲಾದವರು ಉಪಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು ಕಾರ್ಯಕ್ರಮದಲ್ಲಿ ಸ್ವಾಗತಿಸಿ, ನಿರೂಪಿಸಿದರು.


  ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top