ವಿಶ್ವ ಪರಿಸರ ದಿನಾಚರಣೆ: ಗಾಂಧಿನಗರ ಸರಕಾರಿ ಶಾಲಾ ಮಕ್ಕಳಿಗೆ ಬಟ್ಟೆ ಬ್ಯಾಗ್ ವಿತರಣೆ

Upayuktha
0



ಮಂಗಳೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಗರದ ಗಾಂಧಿನಗರದ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಸರಕಾರಿ ಶಾಲೆಯ ಮಕ್ಕಳಿಗೆ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ವಿರುದ್ಧ ಜಾಗೃತಿ ಮೂಡಿಸಲು ಬಟ್ಟೆ ಚೀಲಗಳನ್ನು ವಿತರಿಸಲಾಯಿತು.


ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕ್ಯಾಡೋಲೀಟ್ ಸ್ಪೆಷಲಿಟಿ ಕೆಮಿಕಲ್ಸ್ ಇಂಡಿಯಾ ಪಿಪಿಎಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ಆಯೋಜಿಸಲಾದ ಭಾಷಣ ಸ್ಪರ್ಧೆಯ ಬಹುಮಾನವನ್ನು ದಕ್ಷಿಣ ಕನ್ನಡ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್ ವಿತರಿಸಿ ಮಾತನಾಡಿದರು.


ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ಆಗುವ ಹಾನಿಯ ಕುರಿತು  ಜಾಗೃತಿ ಮೂಡಿಸುವ ಕಾರ್ಯ ಆಗಬೇಕಾಗಿದೆ. ಈ ನಿಟ್ಟಿನಲ್ಲಿ ಮಕ್ಕಳಿಗೆ ಬಟ್ಟೆಯ ಚೀಲ ನೀಡಿ ಜಾಗೃತಿ ಮೂಡಿಸುವುದು ಉತ್ತಮ ಕಾರ್ಯ ಎಂದು ಹೇಳಿದರು.


ಬಟ್ಟೆ ಚೀಲ ವಿತರಿಸಿ ಮಾತನಾಡಿದ ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಮಹಾ ಪ್ರಬಂಧಕ ಅರುಣಾ ಪ್ರಭ, ಪರಿಸರದ ಮೇಲೆ ನಿರಂತರ ನಡೆಯುವ. ಮಾಲಿನ್ಯದಿಂದದಾಗಿ ಗಾಳಿ ಕೂಡ ವಿಷಯುಕ್ತವಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡಲು ಮೊದಲ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಉಪ ಆಯುಕ್ತ ನರೇಶ್ ಶೆಣೈ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್. ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ ಎನ್, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಗಾಂಧಿ ನಗರ ಜಿಲ್ಲಾ ಪಂಚಾಯತ್ ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯನಿ ಫ್ಲೆವಿ ಫೆರ್ನಾಂಡೀಸ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top