ಯೋಗ ಆತ್ಮವಿಶ್ವಾಸದೊಂದಿಗೆ ಸಮತೋಲನ ಸಾಧಿಸುವ ಜೀವನ- ಲಲಿತಾ ಕಲ್ಲೇಶ್

Upayuktha
0


 ದಾವಣಗೆರೆ: ಯೋಗವು ಕೇವಲ ದೈಹಿಕ ವ್ಯಾಯಾಮಕ್ಕೆ ಸೀಮಿತವಲ್ಲ ಪ್ರಾಣಾಯಾಮದೊಂದಿಗೆ ಮಾನವನ ಮನಸ್ಸು ಪುಳಕಿತವಾಗುತ್ತದೆ. ಯೋಗಾಸನ ಆತ್ಮವಿಶ್ವಾಸದ ಜೊತೆಗೆ ಖಿನ್ನತೆ ಕಡಿಮೆ ಮಾಡುತ್ತದೆ ಎಂದು ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕಲ್ಲೇಶ್ ಹೇಳಿದರು.


ದಾವಣಗೆರೆಯ ಕಲಾಕುಂಚ ಕಛೇರಿಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಕಲಾಕುಂಚ ಸಿದ್ದವೀರಪ್ಪ ಬಡಾವಣೆಯ ಶಾಖೆಯ ಆಶ್ರಯದಲ್ಲಿ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. 


ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮಣ್ ರಾಯ್ಕರ್, ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ, ಕಲಾಕುಂಚ ಮಹಿಳಾ ವಿಭಾಗದ ಗೌರವ ಅಧ್ಯಕ್ಷರಾದ ಶ್ರೀಮತಿ ವಸಂತಿ ಮಂಜುನಾಥ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. 


ಯೋಗ ಶಿಕ್ಷಕಿಯರಾದ ಸಂಧ್ಯಾ ಶ್ರೀನಿವಾಸ್ ಪ್ರಾರ್ಥಸಿ, ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್ ಶೆಣೈ ಪ್ರಸ್ತಾವಿಕ ಮಾತನಾಡಿದರು. ಉಚಿತ ಯೋಗ ಶಿಬಿರದಲ್ಲಿ ಭಾಗವಹಿಸಿದ ಎಲ್ಲರಿಗೂ ಅಭಿನಂದನಾ ಪತ್ರ ವಿತರಿಸಲಾಯಿತು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top