ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಆಚರಣೆ

Upayuktha
0

ಯೋಗವನ್ನು ಮಾಡುವುದರಿಂದ ಮನಸ್ಸು ಶುದ್ಧ : ಶರಾವತಿ ಪುತ್ತೂರು


ಪುತ್ತೂರು: ಯೋಗ ಭಾರತದ ಕೊಡುಗೆ. ಭಾರತ ಯೋಗವನ್ನು ವಿಶ್ವಕ್ಕೆ ಪರಿಚಯ ಮಾಡುವ ಕೆಲಸವನ್ನು ಮಾಡಿದೆ. ಯೋಗವನ್ನು ಮಾಡುವುದರ ಮೂಲಕ ಪ್ರತಿಯೊಬ್ಬರೂ ಸಂಕಲ್ಪ ಸಿದ್ಧಿ ಪಡೆಯಲು ಸಾಧ್ಯ ಎಂದು  ಆರ್ಟ್ ಆಫ್ ಲಿವಿಂಗ್‌ನ ಯೋಗ ಶಿಕ್ಷಕಿ ಶರಾವತಿ ರವಿನಾರಾಯಣ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲಿಕಟ್ಟೆ ಪದವಿ ಪೂರ್ವ ವಿದ್ಯಾಲಯದಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಯೋಗವನ್ನು ಮಾಡುವುದರಿಂದ ಮನಸ್ಸು ಶುದ್ಧವಾಗುತ್ತದೆ. ಅರೋಗ್ಯ ವೃದ್ಧಿಯಾಗುತ್ತದೆ ಹಾಗೂ ಒತ್ತಡಗಳ ನಿಯಂತ್ರಣವಾಗುತ್ತದೆ. ಕಲಿಕೆಯ ಜೊತೆಗೆ ಯೋಗವನ್ನು ಅಳವಡಿಸಿಕೊಂಡರೆ ಬುದ್ಧಿ ಚುರುಕಾಗಿ ಚಂಚಲ ಮನಸ್ಸನ್ನು ಹತೋಟಿಯಲ್ಲಿಡಲು ಕೂಡ ಸಾಧ್ಯವಾಗುತ್ತದೆ. ಆದುದರಿಂದ ವಿದ್ಯಾರ್ಥಿಗಳು ಯೋಗದ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. 


ವೇದಿಕೆಯಲ್ಲಿ ಸಂಸ್ಥೆಯ ಪ್ರಾoಶುಪಾಲ ಸತ್ಯಜಿತ್ ಉಪಾಧ್ಯಾಯ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಶತೋಧರಿ ಸ್ವಾಗತಿಸಿದರು. ವಿದ್ಯಾರ್ಥಿನಿ ಆದ್ಯಾ ಕಾರ್ಯಕ್ರಮ ನಿರೂಪಿಸಿ, ಆಪ್ತಾ ರೈ ವಂದಿಸಿದರು.

ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top