ಉತ್ತಮ ಗುಣಮಟ್ಟದ ಜೀವನ ನಡೆಸಲು ಯೋಗ ಸಹಕಾರಿ: ಡಾ. ಜೀವರಾಜ್ ಸೊರಕೆ

Upayuktha
0

S.C.S ಆಸ್ಪತ್ರೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ




ಮಂಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ವಿಶೇಷವಾಗಿ S.C.S ಆಸ್ಪತ್ರೆಯ ಸಿಬ್ಬಂದಿಗಳಿಗೆ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರಿಂದ ಯೋಗ ತರಬೇತಿಯನ್ನು ನೀಡಲಾಯಿತು.


ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಡಾ. ಜೀವರಾಜ್ ಸೊರಕೆಯವರು, ನಿರಂತರ ಯೋಗಾಭ್ಯಾಸವು ಉತ್ತಮ ಗುಣಮಟ್ಟದ ಜೀವನ ನಡೆಸಲು ಸಹಾಯ ಮಾಡುತ್ತದೆ ಮತ್ತು ಕೆಲಸದ ಒತ್ತಡ, ಮಾನಸಿಕ ಆರೋಗ್ಯ ಹಾಗು ಹಲವಾರು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದ ಮುಕ್ತರಾಗಲು ನಿರಂತರ ಯೋಗ ಮಾಡುವಂತೆ ತಮ್ಮ ಆಸ್ಪತ್ರೆಯ ಸಿಬ್ಬಂದಿಗಳಿಗೆ ಕರೆ ಕೊಟ್ಟರು.


ಕಾರ್ಯಕ್ರಮದಲ್ಲಿ ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರ ಶಿಷ್ಯಂದಿರಾದ ಶ್ರೀಮತಿ ನೀನಾ ಪೈ, ಶ್ರೀಮತಿ ಸುಶೀಲ ಕುಮಾರಿ ವಿ, ಶ್ರೀಮತಿ ಭಾರತಿ ಎಸ್ ರಾವ್ ಮತ್ತು ಶ್ರೀಮತಿ ಸುಮಾ ತರಬೇತಿಗೆ ಸಹಕರಿಸಿದರು. ಆಸ್ಪತ್ರೆಯ ಸಿಬ್ಬಂದಿಗಳು ಉತ್ಸಾಹದಿಂದ ಭಾಗವಹಿಸಿದರು. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ಅನೀಸ್ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top