ಅಕ್ಷಯ ಪದವಿಪೂರ್ವ ಕಾಲೇಜಿನಲ್ಲಿ ಫ್ರೆಷಸ್ ಡೇ ಮತ್ತು ಟ್ಯಾಲೆನ್ಸ್ ಡೇ 2026-27 ಫ್ರೆಷಸ್ ಫೆಸ್ಟ್

Upayuktha
0

ಪುತ್ತೂರು: ಅಕ್ಷಯ ಎಜುಕೇಶನ್ & ಚಾರಿಟೇಬಲ್ ಟ್ರಸ್ಟ್ ಆಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಈ ಶೈಕ್ಷಣಿಕ ವರ್ಷದಲ್ಲಿ ಕಾಲೇಜಿಗೆ ಸ್ವಾಗತಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.


ಈ ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಯಂತ್ ನಡುಬೈಲುರವರು ಅಧ್ಯಕ್ಷತೆಯನ್ನು ವಹಿಸಿ ಈ ಸ್ವಾಗತ ಕಾರ್ಯಕ್ರಮ ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳ ನಡುವೆ ಬಾಂಧವ್ಯ ಬೆಳೆಸುವ ಒಂದು ಸೇತುವೆಯಾಗಲಿದೆ ಮುಂದಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಜೊತೆ ಸೇರಿ ಕಾರ್ಯಕ್ರಮವನ್ನು ಯಶಸ್ಸುಗೊಳಿಸಲು ಕಾರ್ಯಕ್ರಮ ಒಂದು ಒಳ್ಳೆಯ ಅವಕಾಶ ನೀಡಿದೆ ಹಾಗೆಯೇ ಟ್ಯಾಲೆನ್ಸ್ ಡೇ ಕೂಡ ಈ ಕಾರ್ಯಕ್ರಮದೊಂದಿಗೆ ಹಮ್ಮಿಕೊಂಡಿದ್ದು ತಮ್ಮದೇ ಆದ ಪ್ರತಿಭೆ ಇದ್ದೇ ಇರುತ್ತದೆ ಅದನ್ನು ಪ್ರದರ್ಶಿಸುವ ಧೈರ್ಯದ ಮೊದಲ ಹೆಜ್ಜೆ ಇಡಲು ಈ ಕಾರ್ಯಕ್ರಮ ಒಂದು ಒಳ್ಳೆಯ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ ಎಂದರು.


ಪದವಿ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳರವರು ಮಾತನಾಡಿ ಅಕ್ಷಯ ಸಮೂಹ ಸಂಸ್ಥೆಯಲ್ಲಿ ಕೇವಲ ಪಾಠ ಅಲ್ಲದೆ ಪಠ್ಯೆತರ ಚಟುವಟಿಕೆಯಲ್ಲಿ ಮಕ್ಕಳ ಭಾಗವಹಿಸುವಿಕೆ ಬಹು ಮುಖ್ಯ ಎಂದು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.


ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆಯಾದ ಗಂಗಾರತ್ನರವರು ಪ್ರಾಸ್ತಾವಿಕವಾಗಿ ಮಾತನಾಡಿ ವಿದ್ಯಾರ್ಥಿಗಳ ಜೀವನದಲ್ಲಿ ಕ್ರಿಯಾಶೀಲತೆ ಎನ್ನುವುದು ಬಹಳ ಮುಖ್ಯ ಅದರಂತೆ ಈ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿ ತಮ್ಮಲ್ಲಿರುವ ವಿವಿಧ ಪ್ರತಿಭೆಗಳನ್ನು ಅನಾವರಣಗೊಳಿಸಿಕೊಳ್ಳಬೇಕು ಎಂದರು.


ಸಂಸ್ಥೆಯ ಆಡಳಿತ ಅಧಿಕಾರಿಯಾದ ಅರ್ಪಿತ್ ಟಿ ರವರು ಮಾತನಾಡಿ ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಬೇಕು ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.


ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶೈಕ್ಷಣಿಕ ನಿರ್ದೇಶಕರಾದ ಅಭಿಲಾಶ್ ಕ್ಷತ್ರಿಯರವರು ಮಾತನಾಡಿ ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ ಮುಖ್ಯ ಅದನ್ನು ಅಳವಡಿಸಿಕೊಂಡು ಜೀವನದಲ್ಲಿ ಮುಂದೆ ಬರಲು ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top