ಚೇತನಾ ಬಾಲವಿಕಾಸ ಕೇಂದ್ರದಲ್ಲಿ ಶಾಲಾ ಪ್ರಾರಂಭೋತ್ಸವ

Upayuktha
0

ಮಂಗಳೂರು: ಸೇವಾಭಾರತಿ (ರಿ) ಮಂಗಳೂರು ಸಂಸ್ಥೆಯ ಅಂಗಸಂಸ್ಥೆಯಾದ ವಿ.ಟಿ. ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲೆಯ 2026-27ನೇ ನೂತನ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಜೂ.1 ರಂದು ಬಹಳ ವಿಜೃಂಭಣೆಯಿಂದ ಜರುಗಿತು. ನಾದಸ್ವರ ಹಾಗೂ ಚೆಂಡೆ ವಾದನಗಳೊಂದಿಗೆ ವಿಠೋಭಾ ದೇವಸ್ಥಾನದಿಂದ ಚೇತನಾ ಶಾಲೆಯವರೆಗೆ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಭಿನ್ನ ಸಾಮರ್ಥ್ಯದ ಮಕ್ಕಳು, ಪೋಷಕರು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು.


ಮುಖ್ಯ ಅತಿಥಿಯಾಗಿ ಆಗಮಿಸಿದ್ದ ದಾನಿಗಳಾದ ಶ್ರೀಮತಿ ರಾಧಾ ಧರ್ಮರಾಜ್ ಅವರು ಶಾಲಾ ಆವರಣದ ಬಾಗಿಲನ್ನು ರಿಬ್ಬನ್ ಬಿಡಿಸಿ ತೆರೆದು ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು. ಆ ನಂತರ ನಡೆದ ಸಮಾರಂಭದಲ್ಲಿ ಹೊಸ ಶೈಕ್ಷಣಿಕ ವರ್ಷವನ್ನು ದೀಪ ಪ್ರಜ್ವಲನೆಯ ಮೂಲಕ ಮುಖ್ಯ ಅತಿಥಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಪ್ರೀತಾ, ಸೇವಾ ಭಾರತಿ ಸಂಸ್ಥೆಯ ವಿಶ್ವಸ್ಥರಾದ ಶ್ರೀ ಗಜಾನನ ಪೈ, ಹಿರಿಯ ಸ್ವಯಂಸೇವಕರಾದ ಶ್ರೀ ಉಮೇಶ್ ಶೆಣೈ ಹಾಗೂ ಇತರ ವಿಶ್ವಸ್ಥರು ಉಪಸ್ಥಿತರಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಶ್ರೀಮತಿ ಚಂಪಾ ಅವರು ನಡೆಸಿಕೊಟ್ಟರು.


ತದನಂತರ, ಶಾಲಾ ಶಿಕ್ಷಕಿಯರು ಮಕ್ಕಳಿಗೆ ಆರತಿ ಬೆಳಗಿ, ತಿಲಕ ಇಟ್ಟು, ಸಿಹಿತಿಂಡಿ ನೀಡುವುದರ ಮೂಲಕ ಸಾಂಪ್ರದಾಯಿಕವಾಗಿ. ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸೇವಾ ಭಾರತಿ ಸಂಸ್ಥೆಯ ಸ್ವಯಂ ಸೇವಕರು, ಕಛೇರಿ ಸಿಬ್ಬಂದಿ, ಶಾಲಾ ಶಿಕ್ಷಕಿಯರು ಹಾಗೂ ಶಿಕ್ಷಕೇತರರು, ಸಿಬ್ಬಂದಿ ವರ್ಗದವರು, ಪೋಷಕರು ಭಾಗವಹಿಸಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top