ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಕಾಲೇಜಿಗೆ ಎರಡು ಚಿನ್ನದ ಪದಕ

Upayuktha
0

ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಡಾ. ಪ್ರಣೀಲ್ ರೋಡ್ರಿಗಸ್ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಎರಡು ಪ್ರತಿಷ್ಠಿತ ಚಿನ್ನದ ಪದಕಗಳನ್ನು ಮುಡಿಗೇರಿಸಿಕೊಂಡು ಶೈಕ್ಷಣಿಕ ಕ್ಷೇತ್ರದಲ್ಲಿ ಅಪೂರ್ವ ಸಾಧನೆ  ಮೆರೆದಿದ್ದಾರೆ.


ಪ್ರಥಮ ವರ್ಷದಿಂದ ಅಂತಿಮ ವರ್ಷದವರೆಗೆ ಅತ್ಯುತ್ತಮ ಶೈಕ್ಷಣಿಕ ಸಾಧನೆ ದಾಖಲಿಸಿ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ರ‍್ಯಾಂಕ್ ಗಳಿಸಿದ ಹಿನ್ನೆಲೆಯಲ್ಲಿ ಸೀತಾರಾಂ ಜಿಂದಾಲ್ ಸಂಸ್ಥೆ ನೀಡುವ ‘ಸೀತಾರಾಂ ಜಿಂದಾಲ್ ಚಿನ್ನದ ಪದಕ' ಅವರಿಗೆ ಲಭಿಸಿದೆ. ಜೊತೆಗೆ, ಆಯುಷ್ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ಸ್ಥಾನ ಪಡೆದ ಸಾಧನೆಗಾಗಿ ಮತ್ತೊಂದು ಚಿನ್ನದ ಪದಕಕ್ಕೂ ಭಾಜನರಾಗಿದ್ದಾರೆ.


ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಿಂದ ಈ ಎರಡೂ ಪ್ರತಿಷ್ಠಿತ ಚಿನ್ನದ ಪದಕಗಳನ್ನು ಸ್ವೀಕರಿಸುವ ಮೂಲಕ ಡಾ. ಪ್ರಣೀಲ್ ರೋಡ್ರಿಗಸ್ ಮತ್ತೊಂದು ಮಹತ್ವದ ಗೌರವಕ್ಕೆ ಪಾತ್ರರಾಗಿದ್ದಾರೆ.

 

ಉಡುಪಿ ಮೂಲದ ಪ್ರೇಮಿಲ್ ರೋಡ್ರಿಗಸ್ ಮತ್ತು ಮೆಲ್ವಿನ್ ರೋಡ್ರಿಗಸ್ ದಂಪತಿಯ ಏಕೈಕ ಪುತ್ರರಾಗಿರುವ ಡಾ. ಪ್ರಣೀಲ್ ರೋಡ್ರಿಗಸ್ ಪ್ರಸ್ತುತ ಬೆಂಗಳೂರಿನ ಬಾಪೂ ಭವನದಲ್ಲಿರುವ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ಸಂಸ್ಥೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


ಈ ಅಪೂರ್ವ ಸಾಧನೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ,  ಕಾಲೇಜಿನ ಪ್ರಾಚರ‍್ಯೆ ಡಾ ವನಿತಾ ಶೆಟ್ಟಿ ಹಾಗೂ ಶಿಕ್ಷಕವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ. 


 ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top