2026ನೇ ಸಾಲಿನ ‘ವಿಎಸ್‌ಕೆ ಮಾಧ್ಯಮ ಪ್ರಶಸ್ತಿ’ ಜುಲೈ 12ರಂದು ಪ್ರದಾನ ; ಕೆ.ಎನ್. ಚನ್ನೇಗೌಡ, ರ‍್ಯಾಪಿಡ್ ರಶ್ಮಿ ಸೇರಿದಂತೆ ಆರು ಸಾಧಕರಿಗೆ ಗೌರವ

Upayuktha
0


ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಸುದ್ದಿ ಸಂವಹನ ಸಂಸ್ಥೆಯಾದ ‘ವಿಶ್ವ ಸಂವಾದ ಕೇಂದ್ರ ಕರ್ನಾಟಕ’ (VSK) ವತಿಯಿಂದ ನೀಡಲಾಗುವ 2026ನೇ ಸಾಲಿನ ವಾರ್ಷಿಕ ‘ವಿಎಸ್‌ಕೆ ಮಾಧ್ಯಮ ಪ್ರಶಸ್ತಿ’ಗಳನ್ನು ಪ್ರಕಟಿಸಲಾಗಿದೆ. ಈ ಬಾರಿ ಪತ್ರಿಕೋದ್ಯಮ ಹಾಗೂ ಡಿಜಿಟಲ್ ಮಾಧ್ಯಮದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಆರು ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.


ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈ 12, 2026ರ ಭಾನುವಾರ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಬಿ.ಎಂ.ಎಸ್. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಜರುಗಲಿದೆ.


ಪ್ರಶಸ್ತಿ ಪುರಸ್ಕೃತರ ವಿವರ:

ಮಾಧ್ಯಮ ರಂಗದ ವಿಭಿನ್ನ ವಿಭಾಗಗಳಲ್ಲಿ ಮುದ್ರೆ ಒತ್ತಿದ ಕೆಳಗಿನ ಸಾಧಕರಿಗೆ ಈ ಸಾಲಿನ ಪ್ರಶಸ್ತಿ ಒಲಿದಿದೆ:

ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿ: ಕೆ.ಎನ್. ಚನ್ನೇಗೌಡ (ಸಂಪಾದಕರು, ವಿಜಯವಾಣಿ)

ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ: ನಾ. ಕಾರಂತ ಪೆರಾಜೆ (ಸಹಾಯಕ ಸಂಪಾದಕರು, ಅಡಿಕೆ ಪತ್ರಿಕೆ)

ಎಂ.ವಿ. ಕಾಮತ್ ಪತ್ರಿಕೋದ್ಯಮ ಪ್ರಶಸ್ತಿ: ನಾಗಾರ್ಜುನ್ ದ್ವಾರಕನಾಥ್ (ದಕ್ಷಿಣ ಭಾರತ ಆವೃತ್ತಿ ಸಂಪಾದಕರು, ಇಂಡಿಯಾ ಟುಡೇ)

ಚಂದ್ರಶೇಖರ ಭಂಡಾರಿ ಪತ್ರಿಕೋದ್ಯಮ ಪ್ರಶಸ್ತಿ: ರಂಗನಾಥ್ ಭಾರದ್ವಾಜ್ (ಮುಖ್ಯ ನಿರ್ಮಾಪಕರು, ಟಿವಿ-9 ಕನ್ನಡ)

ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿ: ಡಾ. ಅರಕಲಗೂಡು ಸೂರ್ಯಪ್ರಕಾಶ್ (ವಿವಿಧ ಪತ್ರಿಕೆಗಳ ಅಂಕಣಕಾರರು)

ವಿ.ಎಸ್.ಕೆ. ಡಿಜಿಟಲ್ ಮೀಡಿಯಾ ಪ್ರಶಸ್ತಿ: ಶ್ರೀಮತಿ ರಶ್ಮೀ ಆರ್ ರಾವ್- ರ‍್ಯಾಪಿಡ್ ರಶ್ಮೀ (ಪ್ರಮುಖ ಆರ್‌ಜೆ ಮತ್ತು ಯೂಟ್ಯೂಬರ್)


ಮುಖ್ಯ ಅತಿಥಿಗಳು:

ಬಹೂಶ್ರುತ ವಿದ್ವಾಂಸರು ಹಾಗೂ ಪದ್ಮಭೂಷಣ ಪುರಸ್ಕೃತರಾದ ಶತಾವಧಾನಿ ಡಾ. ಆರ್. ಗಣೇಶ್ ಮತ್ತು ವಿಶ್ವ ಸಂವಾದ ಕೇಂದ್ರ ಕರ್ನಾಟಕದ ನಿರ್ವಾಹಕ ವಿಶ್ವಸ್ಥರಾದ ಡಾ. ಎಂ.ಕೆ. ಶ್ರೀಧರನ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಕಾರ್ಯಕ್ರಮದ ಕುರಿತು ಹೆಚ್ಚಿನ ವಿವರಗಳಿಗಾಗಿ ಸಾರ್ವಜನಿಕರು ಮೊಬೈಲ್ ಸಂಖ್ಯೆ: 8722552497 ಅನ್ನು ಸಂಪರ್ಕಿಸಬಹುದಾಗಿದೆ.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 




Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top