ಉಜಿರೆ: ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ-ಪ್ರವಚನ ಕಾರ್ಯಕ್ರಮವು ಜುಲೈ 16 ರಿಂದ ಸೆಪ್ಟೆಂಬರ್ 17ರವರೆಗೆ ನಡೆಯಲಿದೆ. ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6.30ರಿಂದ 8 ಗಂಟೆವರೆಗೆ ಪುರಾಣ ವಾಚನ-ಪ್ರವಚನ ನಡೆಯಲಿದ್ದು, ಖ್ಯಾತ ವಿದ್ವಾಂಸರು ಹಾಗೂ ಕಲಾವಿದರಿಂದ ಕುಮಾರವಾಲ್ಮೀಕಿ ವಿರಚಿತ “ತೊರವೆ ರಾಮಾಯಣ”ದ ವಾಚನ-ಪ್ರವಚನ ನಡೆಸಿಕೊಡುತ್ತಾರೆ.
ಶನಿವಾರ ಮತ್ತು ಭಾನುವಾರಗಳಲ್ಲಿ ವಿವಿಧ ಕಾವ್ಯಗಳ ಆಯ್ದ ಭಾಗಗಳನ್ನು ವಾಚನ-ಪ್ರವಚನಕ್ಕೆ ಬಳಸಲಾಗುವುದು.
ಜುಲೈ ೧೬ ರಂದು ಗುರುವಾರ ಮತ್ತು ೧೭ ರಂದು ಶುಕ್ರವಾರ ಗಣಪತಿ ಭಟ್ ಪದ್ಯಾಣ ವಾಚನಕಾರರಾಗಿಯೂ, ಹವ್ಯಾಸಿ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಪ್ರವಚನಕಾರರಾಗಿಯೂ ಭಾಗವಹಿಸುವರು.
ಉದ್ಘಾಟನಾ ಸಮಾರಂಭ: ಜುಲೈ ೧೬ ರಂದು ಬುಧವಾರ ಸಂಜೆ ೫ ಗಂಟೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಸದ್ಗುರು ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಪುರಾಣ ವಾಚನ-ಪ್ರವಚನ ಕಾರ್ಯಕ್ರಮ ಉದ್ಘಾಟಿಸುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು ಎಂದು ಪುರಾಣ ವಾಚನ-ಪ್ರವಚನ ಸಮಿತಿಯ ಸಂಚಾಲಕರಾದ ಎ.ವಿ. ಶೆಟ್ಟಿ ತಿಳಿಸಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


