ತುಳು ರಂಗಭೂಮಿ–ಜಾನಪದ ಕ್ಷೇತ್ರದ ಹಿರಿಯ ಹಾಗೂ ಪತ್ರಕರ್ತ ಪರಮಾನಂದ ಸಾಲ್ಯಾನ್‌ ಅವರಿಗೆ ಪ್ರೆಸ್‌ಕ್ಲಬ್‌ನಲ್ಲಿ ನುಡಿನಮನ

Upayuktha
0



ಮಂಗಳೂರು: ಇತ್ತೀಚೆಗೆ ನಿಧನರಾದ ಹಿರಿಯ ಪತ್ರಕರ್ತ, ರಂಗಕರ್ಮಿ ಪರಮಾನಂದ ಸಾಲ್ಯಾನ್ ಅವರಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು.


ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮಾತನಾಡಿ, ಪರಮಾನಂದ ಸಾಲ್ಯಾನ್ ಅವರು ಪತ್ರಿಕಾ ರಂಗದ ಜತೆಗೆ ತುಳು ರಂಗಭೂಮಿ ಮತ್ತು ಜಾನಪದ ಕ್ಷೇತ್ರದಲ್ಲಿ ಅಪಾರ ಜ್ಞಾನ ಹೊಂದಿದ್ದರು. ಭೂತಾರಾಧಾನೆ, ನಾಟಕ, ತುಳುನಾಡಿನ ಸಂಸ್ಕೃತಿಯ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದ ಅವರು ಕಿರಿಯ ಪತ್ರಕರ್ತರಿಗೆ ಕಲಿಸುವ ಮಾದರಿಯಂತೂ ವಿಶಿಷ್ಟವಾಗಿತ್ತು ಎಂದರು.


ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಮಾತನಾಡಿ ಬಹುಮುಖ ಪ್ರತಿಭೆಯಾಗಿದ್ದ ಪರಮಾನಂದ ಸಾಲ್ಯಾನ್ ಅವರು ಎಲ್ಲರೊಂದಿಗೆ ಸ್ನೇಹದಿಂದ ಬೆರೆಯುವ ವ್ಯಕ್ತಿಯಾಗಿದ್ದರು. ಅವರಲ್ಲಿದ್ದ ತುಳು ಪಾಂಡಿತ್ಯ, ಭಾಷಾ ಶುದ್ಧತೆ ಯುವ ಪೀಳಿಗೆಗೆ ಮಾರ್ಗದರ್ಶಿ ಎಂದರು.


ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಮಾಜಿ ಅಧ್ಯಕ್ಷ ಜಗನ್ನಾಥ್ ಶೆಟ್ಟಿ ಬಾಳ, ಭಾಸ್ಕರ ರೈ ಕಟ್ಟ,  ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ನುಡಿನಮನ ಸಲ್ಲಿಸಿದರು. ಸಂಘದ ಪದಾಧಿಕಾರಿಗಳಾದ ವಿಲ್ಫ್ರೆಡ್ ಡಿಸೋಜ, ರಾಜೇಶ್ ಶೆಟ್ಟಿ, ರಾಜೇಶ್ ದಡ್ಡಂಗಡಿ ಉಪಸ್ಥಿತರಿದ್ದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top