ತುಮಕೂರು: ನಗರದ ಕನ್ನಡ ಭವನದಲ್ಲಿ ಇದೇ ಜುಲೈ 11ರ ಶನಿವಾರದಂದು 'ಅರಿವಿನ ಮರ' ಪುಸ್ತಕದ ಲೋಕಾರ್ಪಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ತುಮಕೂರು ಜಿಲ್ಲಾ ಘಟಕ, ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಅಯೋಧ್ಯಾ ಪ್ರಕಾಶನ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಈ ಸಾಹಿತ್ಯಿಕ ಸಮಾರಂಭ ಆಯೋಜನೆಗೊಂಡಿದೆ. ಅಂದು ಮಧ್ಯಾಹ್ನ 4.30 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ರೋಹಿತ್ ಚಕ್ರತೀರ್ಥ, ಡಾ. ವಿನೀತ್ ಕುಮಾರ್ ಟಿ..ವಿ. ಮತ್ತು ಪಾಂಡುರಂಗ ನಾರಾಯಣ ಅವರು ಸಂಪಾದಿಸಿರುವ 'ಅರಿವಿನ ಮರ' (ಪಲ್ಲಟಗಳ ಆನಾವರಣ) ಎಂಬ ಕೃತಿಯನ್ನು ಲೋಕಾರ್ಪಣೆಗೊಳಿಸಲಾಗುವುದು.
ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್. ಸಿದ್ದಲಿಂಗಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಖ್ಯಾತ ಲೇಖಕರು ಹಾಗೂ ಅನುವಾದಕರಾದ ಬಿ.ಎಸ್. ಜಯಪ್ರಕಾಶ್ ನಾರಾಯಣ ಅವರು ಕೃತಿಯ ಕುರಿತು ಅವಲೋಕನ ನಡೆಸಿಕೊಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಹಾಗೂ ಅಯೋಧ್ಯಾ ಪಬ್ಲಿಕೇಷನ್ಸ್‌ನ ಪ್ರಕಾಶಕರು, ಚಿಂತಕರಾದ ರೋಹಿತ್ ಚಕ್ರತೀರ್ಥ ಉಪಸ್ಥಿತರಿರಲಿದ್ದಾರೆ. ಸಾಹಿತ್ಯಾಸಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


