ಬಂಟ ವಲಯ ಕಾವಳಕಟ್ಟೆ: ಆಟಿದ ಕೂಟ

Upayuktha
0

ಸಾಂಪ್ರದಾಯಿಕ ಆಚರಣೆ ಸಮುದಾಯಗಳ ಒಗ್ಗಟ್ಟಿಗೆ ಪೂರಕ: ಜಗನ್ನಾಥ ಚೌಟ ಬದಿಗುಡ್ಡೆ



  • ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ 
  • ಸಂಘದಿಂದ ಶಾಲೆಗೆ 4 ಫ್ಯಾನ್ ಹಸ್ತಾಂತರ 
  • ವಿದೂಷಿ ಸಹನಾ ಎಂ. ಶೆಟ್ಟಿಗೆ ಸನ್ಮಾನ


ಬಂಟ್ವಾಳ: ಆಟಿ ಕೂಟವು ಕೇವಲ ಸಾಂಪ್ರದಾಯಿಕ ಆಚರಣೆಯಲ್ಲ, ಇದು ಬಂಟ ಸಮುದಾಯದ ಸಂಸ್ಕೃತಿ, ಪರಂಪರೆ, ಕೌಟುಂಬಿಕ ಬಾಂಧವ್ಯ ಹಾಗೂ ಸಾಮಾಜಿಕ ಚಿಂತನೆಯನ್ನು ಗಟ್ಟಿಗೊಳಿಸುವ ಜೀವಂತ ವೇದಿಕೆ. ಪಾರಂಪರಿಕ ಆಚರಣೆಗಳು ಸಹಕಾರ ಮತ್ತು ಸಹಬಾಳ್ವೆಯ ಬದುಕನ್ನು ಉತ್ತೇಜಿ, ಒಂದೇ ಕುಟುಂಬದಂತೆ ಬದುಕುವ ಶಕ್ತಿಯನ್ನು ಹೊಂದಿದೆ ಎಂದು ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಅಭಿಪ್ರಾಯ ಪಟ್ಟರು.


ಇವರು ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಕೆದ್ದಳಿಕೆಯ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಆಯೋಜಿಸಿದ್ದ ಆಟಿದ ಕೂಟ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.


ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಪ್ರತಿಭೆಯನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿ. ಇಂದು ಪುರಸ್ಕಾರ ಪಡೆದ ವಿದ್ಯಾರ್ಥಿಗಳೇ ಈ ಸಮಾಜದ ನಾಳಿನ ನಾಯಕರು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ಸಮಾಜ ಸೇವೆ ಹಾಗೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಜೀವನ ಸಾರ್ಥಕವೆನಿಸುತ್ತದೆ. ವಲಯದ ಬಂಟರ ಸಂಘವು ಶಿಕ್ಷಣ ಮತ್ತು ಸಂಸ್ಕೃತಿಗೆ ನಿರಂತರ ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿರುವುದು ನಿಜಕ್ಕೂ ಶ್ಲಾಘನೀಯ. ಇತರೆ ಸಂಘ ಸಂಸ್ಥೆಗಳಿಗೂ ಇದು ಮಾದರಿಯಾಗಲಿ ಎಂದರು. 


ಕಾರ್ಯಕ್ರಮವನ್ನು ವಲಯದ ಹಿರಿಯ ದಂಪತಿಗಳಾದ ವೇದಾವತಿ ಹಾಗೂ ಲೋಕಯ್ಯ ಶೆಟ್ಟಿ ಕಜೆಕೋಡಿ ಉದ್ಘಾಟಿಸಿದರು. ಬಳಿಕ ಶುಚಿ ರೈ ಹಾಗೂ ಪ್ರಮೋದ್ ಕುಮಾರ್ ರೈ ಸಂಪ್ರದಾಯಿಕ ಪ್ರತೀಕವಾದ ಚೆನ್ನೆಮಣೆ ಹಾಗೂ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಸಮಾರಂಭಕ್ಕೆ ವಿಶೇಷ ಮೆರುಗು ತಂದರು.


ಅಭ್ಯಾಗತರಾದ ಅಡ್ವೆಂಚರ್ ಪಿಯು ಕಾಲೇಜಿನ ಅಧ್ಯಕ್ಷ ಅಮೃತ್ ರೈ ಮಾತನಾಡಿ ಪೋಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಕಲಿಸಿದಾಗ ಮಕ್ಕಳು ಸಮಾಜದ ಆಸ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದರು. ಸಂಘದ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ ಸಂಘದ ವಾರ್ಷಿಕ ವರದಿ ಹಾಗೂ 2025–26ನೇ ಸಾಲಿನ ಲೆಕ್ಕ ಪತ್ರಗಳನ್ನು ವಾಚಿಸಿದರು.


ಕಾರ್ಯಕ್ರಮದಲ್ಲಿ ತಾಲೂಕು ಬಂಟರ ಸಂಘದ ಕೋಶಾಧಿಕಾರಿ ಲೋಕೇಶ್ ಶೆಟ್ಟಿ ಕುಲ, ಜೊತೆ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ, ಗೋವಿಂದಾಸ್ ಕಾಲೇಜಿನ ಉಪನ್ಯಾಸಕಿ ಹಾಗೂ ಎನ್‌ಸಿಸಿ ಮೇಜರ್ ಡಾ. ಸುಧಾ ಚಂದ್ರಶೇಖರ್ ಶೆಟ್ಟಿ, ತಾಲೂಕು ಮಹಿಳಾ ವಿಭಾಗದ ಅಧ್ಯಕ್ಷೆ ಸುಜಾತಾ ಪಿ. ರೈ, ವಾಮದಪದವು ವಲಯದ ಅಧ್ಯಕ್ಷ ವಸಂತ್ ಶೆಟ್ಟಿ ಕೇದಗೆ, ಸರಪಾಡಿ ವಲಯದ ಅಧ್ಯಕ್ಷ ದಯಾನಂದ್ ಶೆಟ್ಟಿ, ಶ್ರೀ ದುರ್ಗಾ ಯಾತ್ರಿ ನಿವಾಸದ ಮಾಲಕರಾದ ಪ್ರಕಾಶ್ ಶೆಟ್ಟಿ, ಪ್ರಗತಿಪರ ಕೃಷಿಕ ಸದಾಶಿವ ಶೆಟ್ಟಿ ಕೈಮಾರು, ನಾರಾಯಣ ಶೆಟ್ಟಿ ಕುಮಂಗಿಲ, ಉದ್ಯಮಿ ಬಾಲಕೃಷ್ಣ ಶೆಟ್ಟಿ ಇರ್ವತ್ತೂರು, ಸೀತಾರಾಮ್ ಶೆಟ್ಟಿ ಪೆರುವಾರು, ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರೋಷನ್ ಶೆಟ್ಟಿ ದೋಟ, ಇರ್ವತ್ತೂರು ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಶಂಕರ್ ಶೆಟ್ಟಿ ಬೆದ್ರುಮಾರು, ಕಾವಳಕಟ್ಟೆ ವಲಯದ ಗೌರವಾಧ್ಯಕ್ಷ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಬಿಯಂತಬೆಟ್ಟು ಹಾಗೂ ಚಂದ್ರಶೇಖರ್ ಶೆಟ್ಟಿ ಪುಳಿಮಜಲು, ಕೋಶಾಧಿಕಾರಿ ಚಂದ್ರಶೇಖರ್ ಶೆಟ್ಟಿ ಪಣೆಕಲ, ಯುವ ವಿಭಾಗದ ಅಧ್ಯಕ್ಷ ಕಿಶೋರ್ ರೈ ಕಾಡಬೆಟ್ಟು ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗು ಸದಸ್ಯರು ಉಪಸ್ಥಿತರಿದ್ದರು.


ಸಮಾರೋಪ ಸಮಾರಂಭದಲ್ಲಿ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಘಟನಾ ಕಾರ್ಯದರ್ಶಿ ಪುನೀತ್ ಶೆಟ್ಟಿ ಸ್ವಾಗತಿಸಿ ದಿನೇಶ್ ಶೆಟ್ಟಿ ಕಾವಳಕಟ್ಟೆ ಪ್ರಾಸ್ತಾವಿಕ ಮಾತನಾಡಿದರು. ಮಾನ್ವಿ ಮತ್ತು ಸಾನ್ವಿ ಪ್ರಾರ್ಥಿಸಿದರು. ಗಣೇಶ್ ಶೆಟ್ಟಿ ಮತ್ತು ನಿಧಿಶಾ ಕಾರ್ಯಕ್ರಮ ನಿರೂಪಿಸಿದರೆ, ನಿಶ್ಚಿತ್ ಶೆಟ್ಟಿ ವಂದಿಸಿದರು. ಪ್ರಾಪ್ತಿ ಶೆಟ್ಟಿ, ನಾಗೇಶ್ ರೈ, ಕಿಶೋರಿ ಶೆಟ್ಟಿ, ಪವಿತ್ರ ಶೆಟ್ಟಿ ಸಹಕರಿಸಿದರು.


ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ:

ಕಳೆದ ಶೈಕ್ಷಣಿಕ ವರ್ಷದ ಎಸ್‌.ಎಸ್‌.ಎಲ್‌.ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲೀಲಾವತಿ ಶೆಟ್ಟಿ ಹಾಗೂ ಸದಾಶಿವ ಶೆಟ್ಟಿ ದಂಪತಿಗಳ ಪ್ರಾಯೋಜಕತ್ವದಲ್ಲಿ, ತಮ್ಮ ವಿವಾಹದ ಸುವರ್ಣ ಮಹೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ ಮಾಡಲಾಯಿತು. ಶೇ.85ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಿ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆಗೈಯುವಂತೆ  ಪ್ರೋತ್ಸಾಹಿಸಲಾಯಿತು.


ಇದೇ ಸಂಧರ್ಭದಲ್ಲಿ  ಕೆದ್ದಳಿಕೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಬಂಟರ ಸಂಘ ಕಾವಳಕಟ್ಟೆ ವಲಯದಿಂದ 04 ಫ್ಯಾನ್ ಶಾಲಾ ಮುಖ್ಯೋಪಾಧ್ಯಾಯರಿಗೆ  ಹಸ್ತಾಂತರ ಮಾಡಲಾಯಿತು.


ವಿದೂಷಿ ಸಹನಾ ಎಂ. ಶೆಟ್ಟಿಗೆ ಸನ್ಮಾನ:

ಭರತನಾಟ್ಯ ಮತ್ತು ಕರಾಟೆಯಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದು ಇತ್ತೀಚೆಗೆ ವಿದೂಷಿ ಪದವಿ ಪಡೆದು ರಂಗಪ್ರವೇಶ ಮಾಡಿದ ಕುಮಾರಿ ಸಹನಾ ಎಂ. ಶೆಟ್ಟಿ ನರ್ವಲ್ದಡ್ಡ ಇವರನ್ನು ಕಾವಳಕಟ್ಟೆ ವಲಯ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top