ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಮತ್ತು ಐಸಿಎಆರ್–ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ನಡುವೆ ಒಪ್ಪಂದ

Upayuktha
0

 


ಕಾರ್ಕಳ: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಜು.೧೫ ರಂದು ನಿಟ್ಟೆ ತಾಂತ್ರಿಕ ಕಾಲೇಜಿನ ಹಾಗೂ ಸುತ್ತೂರಿನ ಐಸಿಎಆರ್–ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ (ICAR–JSS Krishi Vigyan Kendra) ದ ನಡುವೆ ಸಂಶೋಧನೆ, ನಾವೀನ್ಯತೆ, ತಂತ್ರಜ್ಞಾನ ವರ್ಗಾವಣೆ ಹಾಗೂ ವಿದ್ಯಾರ್ಥಿಗಳ ಇಂಟರ್ನ್‌ಶಿಪ್ ಅವಕಾಶಗಳನ್ನು ಉತ್ತೇಜಿಸುವ ಉದ್ದೇಶದಿಂದ ಪರಸ್ಪರ ಸಹಕಾರ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಲಾಯಿತು.


ಐಸಿಎಆರ್–ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಜ್ಞಾನೇಶ್ ನಂಜಪ್ಪ ಮತ್ತು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಲುಂಕರ್ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.


ಈ ಒಪ್ಪಂದದ ಮೂಲಕ ಎರಡೂ ಸಂಸ್ಥೆಗಳು ಸಂಶೋಧನಾ ಚಟುವಟಿಕೆಗಳು, ತಂತ್ರಜ್ಞಾನ ಅಭಿವೃದ್ಧಿ ಮತ್ತು ವರ್ಗಾವಣೆ, ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳು ಹಾಗೂ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಬೇತಿ ಮತ್ತು ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸುವ ನಿಟ್ಟಿನಲ್ಲಿ ಪರಸ್ಪರ ಸಹಕಾರಿಯಾಗಲಿದೆ. 

ಈ ಒಪ್ಪಂದ ಸಹಿ ಕಾರ್ಯಕ್ರಮವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಎಸ್.ಎಂ ಅವರ ಮಾರ್ಗದರ್ಶನದಲ್ಲಿ ಬಯೋಟೆಕ್ನಾಲಜಿ ವಿಭಾಗದ ಸಹಪ್ರಾಧ್ಯಾಪಕಿ ಡಾ. ಸ್ನೇಹಾ ನಾಯಕ್ ಅವರು ಸಂಯೋಜಿಸಿದರು. ಬಯೋಟೆಕ್ನಾಲಜಿ ವಿಭಾಗದ ಸಹಪ್ರಾಧ್ಯಾಪಕಿ ಡಾ. ಲೊಯಲ್ಲ ಸಿ ಗೋವಿಯಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top