ಅಕ್ಷಯ ಕಾಲೇಜಿನಲ್ಲಿ ಅಭಿಜ್ಞ ಎಜುಕೇಶನ್‌ನೊಂದಿಗೆ ಒಡಂಬಡಿಕೆ

Upayuktha
0

ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಡೇಟಾ ಅನಾಲಿಟಿಕ್ಸ್ ಕುರಿತು ಓರಿಯೆಂಟೇಶನ್ ಕಾರ್ಯಕ್ರಮ 

 


ಪುತ್ತೂರು: ಅಕ್ಷಯ ಕಾಲೇಜಿನ ಬೈಟ್ಬ್ಲಿಟ್ಜ್ಐಟಿ ಕ್ಲಬ್ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಅಭಿಜ್ಞ ಎಜುಕೇಶನ್ ಸಹಯೋಗದೊಂದಿಗೆ ಒಡಂಬಡಿಕೆ (MoU) ಸಹಿ ಕಾರ್ಯಕ್ರಮ ಹಾಗೂ ಕೃತಕ ಬುದ್ಧಿಮತ್ತೆ (Artificial Intelligence), ಸೈಬರ್ ಭದ್ರತೆ (Cyber Security) ಮತ್ತು ಡೇಟಾ ಅನಾಲಿಟಿಕ್ಸ್ (Data Analytics) ಕುರಿತು ಓರಿಯೆಂಟೇಶನ್ ಕಾರ್ಯಕ್ರಮ ನೆರವೇರಿತು

 

ಕಾರ್ಯಕ್ರಮದ ಮುಖ್ಯ ಅತಿಥಿ ಡಾ. ಶಶಾಂಕ್ ಶೆಟ್ಟಿ, ಸಹ ಪ್ರಾಧ್ಯಾಪಕರು, ಸಿಎಸ್ ವಿಭಾಗ, ಎನ್ಎಂಎಎಂಐಟಿ ಹಾಗೂ ಸಹ-ಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಇನ್ಸ್ಪಿರಾಂಟೆ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಡೇಟಾ ಅನಾಲಿಟಿಕ್ಸ್ ಕ್ಷೇತ್ರಗಳಲ್ಲಿ ಅಪಾರ ಉದ್ಯೋಗಾವಕಾಶಗಳಿವೆ ಎಂದು ತಿಳಿಸಿದರು. ತಾಂತ್ರಿಕ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವ ಮತ್ತು ನಿರಂತರ ಕಲಿಕೆಯೇ ಯಶಸ್ಸಿನ ಗುಟ್ಟು ಎಂದು ಹೇಳಿದರು.

 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಯಂತ ನಡುಬೈಲ್, ಅಧ್ಯಕ್ಷರು, ಅಕ್ಷಯ ಸಮೂಹ ಸಂಸ್ಥೆಗಳು, ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶಿಕ್ಷಣ ಮತ್ತು ಕೈಗಾರಿಕೆಯ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ಇಂತಹ ಒಡಂಬಡಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು. ಸಹಭಾಗಿತ್ವದಿಂದ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಹಾಗೂ ಉದ್ಯೋಗಾವಕಾಶಗಳು ದೊರೆಯಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

 

ಅಭಿಜ್ಞ ಎಜುಕೇಶನ್ ಸಂಸ್ಥಾಪಕ ಹಾಗೂ ಮಾಲೀಕ ಅಭಿಲಾಷ್ ಕ್ಷತ್ರಿಯ ಮಾತನಾಡಿ, ಒಡಂಬಡಿಕೆಯಡಿ ವಿದ್ಯಾರ್ಥಿಗಳಿಗೆ AI, Cyber Security ಹಾಗೂ Data Analytics ವಿಷಯಗಳಲ್ಲಿ ವಿಶೇಷ ತರಬೇತಿ ನೀಡಲಾಗುವುದು ಎಂದರು. ತರಬೇತಿಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಲೈವ್ ಇಂಡಸ್ಟ್ರಿ ಪ್ರಾಜೆಕ್ಟ್ಗಳನ್ನು ಕೈಗೆತ್ತಿಕೊಳ್ಳುವ ಅವಕಾಶ ಕಲ್ಪಿಸಲಾಗುವುದು. ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ (Certificate) ನೀಡುವುದರ ಜೊತೆಗೆ ಇಂಟರ್ನ್ಶಿಪ್ ಅವಕಾಶ ಕೂಡ ಒದಗಿಸಲಾಗುವುದು ಎಂದು ತಿಳಿಸಿದರು. ಇದರಿಂದ ವಿದ್ಯಾರ್ಥಿಗಳು ಕೈಗಾರಿಕಾ ಅನುಭವವನ್ನು ಪಡೆದು ತಮ್ಮ ವೃತ್ತಿ ಜೀವನಕ್ಕೆ ಭದ್ರ ಅಡಿಪಾಯ ಹಾಕಿಕೊಳ್ಳಬಹುದು ಎಂದು ಹೇಳಿದರು.

 

ಸಂದರ್ಭದಲ್ಲಿ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.., ಹಾಗೂ ಬಿಸಿಎ ವಿಭಾಗದ ಮುಖ್ಯಸ್ಥೆ ದೀಕ್ಷಾ ರೈ ಉಪಸ್ಥಿತರಿದ್ದರು.

 

ಲಾವಣ್ಯ ಪ್ರಾರ್ಥಿಸಿ, ಅಭಿಲಾಷ್ ಕ್ಷತ್ರಿಯ ಸ್ವಾಗತಿಸಿದರು. ಮುಖ್ಯ ಅತಿಥಿಯನ್ನು ದೀಕ್ಷಾ ರೈ  ಪರಿಚಯಿಸಿ, ಸುಪ್ರಭಾ ಕೆ. ನಿರೂಪಿಸಿದರು. ಸರೋಶ್ ನಾಯಕ್ ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top