ಪುತ್ತೂರು : ಅಕ್ಷಯ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ 2026 - 27ನೇ ಸಾಲಿನ ವಿದ್ಯಾರ್ಥಿ ಪರಿಷತ್ತು ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ, ಪ್ರಭಾರ ಕ್ಷೇತ್ರ ಶಿಕ್ಷಣ ಅಧಿಕಾರಿ ಮೋನಪ್ಪ ಪೂಜಾರಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಬಹಳಷ್ಟು ದೊಡ್ಡ ಸ್ಥಾನಕ್ಕೆ ಹೋಗುವ ಹಂತ ಪದವಿ ಪೂರ್ವ ಹಂತವಾಗಿದ್ದು ಈ ಹಂತದಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವವನ್ನು ಪರಿಚಯಿಸುವ ಈ ಕಾರ್ಯಕ್ರಮ ಬಹಳಷ್ಟು ಅರ್ಥಪೂರ್ಣವಾಗಿದೆ. ಜೀವನದ ಸಾಧನೆಗೆ ಈಗಿನಿಂದ ತಯಾರಿ ನಡೆಸುವ ಗುರಿ ನಿಮ್ಮದಾಗಿರಲಿ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು, ಹಾಗೆಯೇ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಕುರಿತು ಮಾತನಾಡಿ ಈ ಸಂಸ್ಥೆ ಒಂದು ಉನ್ನತ ಮಟ್ಟದ ಶಿಕ್ಷಣವನ್ನು ನೀಡಿ ಹಲವು ರೀತಿಯ ವೃತ್ತಿಪರ ಶಿಕ್ಷಣಕ್ಕೆ ಒತ್ತನ್ನು ನೀಡಿ ಹಲವು ಕ್ಷೇತ್ರಗಳಲ್ಲಿ ತಮ್ಮ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವಂತೆ ಮಾಡಿದ್ದು ಗಮನಾರ್ಹ ವಿಷಯವಾಗಿದೆ. ಇದೇ ರೀತಿ ಇನ್ನು ಮುಂದೆಯೂ ಈ ಶಿಕ್ಷಣ ಸಂಸ್ಥೆ ಇನ್ನೂ ಉನ್ನತ ಮಟ್ಟಕ್ಕೆ ತಲುಪಲಿ ಎಂದು ತಮ್ಮ ಆಶಯವನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಜಯಂತ ನಡುಬೈಲು ಮಾತನಾಡಿ ವಿದ್ಯಾರ್ಥಿ ಜೀವನವು ಒಂದು ಪ್ರಮುಖ ಘಟ್ಟವಾಗಿದ್ದು ಈ ಹಂತದಿಂದ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದು ಅಗತ್ಯ ಹಾಗೂ ವಿದ್ಯಾರ್ಥಿ ಸಂಘದಿಂದ ಹಲವು ಜವಾಬ್ದಾರಿಯುತ ಕೆಲಸಗಳು ನಡೆದು ಸಂಸ್ಥೆಗೆ ಒಳ್ಳೆಯ ಹೆಸರು ಮತ್ತು ಗೌರವವನ್ನು ತರಲಿ ಎಂದು ಆಶಯವನ್ನು ವ್ಯಕ್ತಪಡಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಉಪಕಾರ್ಯದರ್ಶಿ ಹಾಗೂ ವಿವಿಧ ಸಂಘಗಳಾದ ವಾಣಿಜ್ಯ, ಸಾಂಸ್ಕೃತಿಕ, ವಿಜ್ಞಾನ, ಕ್ರೀಡಾ, ತಂತ್ರಜ್ಞಾನ ಮತ್ತು ಸಾಹಿತ್ಯ ಸಂಘದ ಉದ್ಘಾಟನೆಯು ನೆರವೇರಿತು. ಈ ಸಂಘಗಳ ಪದಾಧಿಕಾರಿಗಳಿಗೆ ಪ್ರಮಾಣ ವಚನವನ್ನು ಕಾಲೇಜಿನ ಪ್ರಾಂಶುಪಾಲೆ ಗಂಗಾರತ್ನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ನಿರ್ದೇಶಕಿ ಕಲಾವತಿ ಜಯಂತ್, ಆಡಳಿತಾಧಿಕಾರಿ ಅರ್ಪಿತ್ ಟಿ ಎ, ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ, ಶೈಕ್ಷಣಿಕ ನಿರ್ದೇಶಕ ಅಭಿಲಾಶ್ ಕ್ಷತ್ರಿಯ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಹುವೈಸ್ ಮಿಸ್‌ಬಾ, ಕಾರ್ಯದರ್ಶಿ ಮಹಮ್ಮದ್ ಹಾಷಿಮ್, ವಿವಿಧ ಸಂಘದ ಪದಾಧಿಕಾರಿಗಳು ಹಾಗೂ ಬೋಧಕ - ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


