ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವೃತ್ತಿ ಮಾರ್ಗದರ್ಶನ

Upayuktha
0

ವ್ಯಾಪಾರಿ ನೌಕಾ ಕ್ಷೇತ್ರದಲ್ಲಿ ಅಪಾರ ಉದ್ಯೋಗಾವಕಾಶಗಳಿವೆ : ಶಶಾಂಕ್ ಮನೈ



ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉನ್ನತ ಶಿಕ್ಷಣ ಹಾಗೂ ಭವಿಷ್ಯದ ವೃತ್ತಿ ಆಯ್ಕೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಸ್ಪಷ್ಟ ಅರಿವು ಮೂಡಿಸುವ ಉದ್ದೇಶದಿಂದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.  


ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂಸ್ಥೆಯ ವಿದ್ಯಾರ್ಥಿ ಹಾಗೂ ಪ್ರಸ್ತುತ ಅಮೇರಿಕನ್ ಮೂಲದ ಚೆವ್ರಾನ್ ಶಿಪ್ಪಿಂಗ್ ಕಂಪೆನಿಯ ಎಲ್.ಎನ್.ಜಿ. ಕ್ಯಾರಿಯರ್ ಹಡಗಿನಲ್ಲಿ ಮೂರನೇ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಶಾಂಕ್ ಮನೈ ಭಾಗವಹಿಸಿ, ನೌಕಾ ಕ್ಷೇತ್ರದಲ್ಲಿನ ವೃತ್ತಿ ಅವಕಾಶಗಳು, ಅಗತ್ಯ ಅರ್ಹತೆಗಳು, ಪ್ರವೇಶ ಪರೀಕ್ಷೆಗಳು, ತರಬೇತಿ ಹಾಗೂ ಉದ್ಯೋಗದ ಸಾಧ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು. 


ಸ್ಪಷ್ಟ ಗುರಿ, ನಿರಂತರ ಪರಿಶ್ರಮ ಮತ್ತು ಸರಿಯಾದ ಮಾರ್ಗದರ್ಶನದ ಮೂಲಕ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ಜಾಗತಿಕ ಮಟ್ಟದಲ್ಲಿ ವ್ಯಾಪಾರಿ ನೌಕಾ ಕ್ಷೇತ್ರದಲ್ಲಿ ಉತ್ತಮ ವೇತನÀ, ವೃತ್ತಿ ಬೆಳವಣಿಗೆ ಮತ್ತು ವಿವಿಧ ದೇಶಗಳಿಗೆ ಭೇಟಿ ನೀಡುವ ಅವಕಾಶಗಳಿರುವುದರಿಂದ, ಆಸಕ್ತಿ ಹಾಗೂ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ವೃತ್ತಿಯಾಗಿ ಆಯ್ಕೆ ಮಾಡಬಹುದು ಎಂದು ಹೇಳಿದರು. 


ವಿದ್ಯಾರ್ಥಿಗಳು ಇಂಗ್ಲಿಷ್ ಭಾಷಾ ಕೌಶಲ್ಯ, ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಉತ್ತಮ ಹಿಡಿತ ಸಾಧಿಸುವುದರೊಂದಿಗೆ ಶಿಸ್ತು, ಸಮಯಪಾಲನೆ, ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆಯನ್ನು ಬೆಳೆಸಿಕೊಳ್ಳುವುದು ಅತ್ಯಗತ್ಯ. ಪರಿಶ್ರಮ, ಆತ್ಮವಿಶ್ವಾಸ ಮತ್ತು ಸರಿಯಾದ ಮಾರ್ಗದರ್ಶನದ ಮೂಲಕ ವ್ಯಾಪಾರಿ ನೌಕಾ ಕ್ಷೇತ್ರದಲ್ಲಿ ಯಶಸ್ವಿ ವೃತ್ತಿಜೀವನ ಕಟ್ಟಿಕೊಳ್ಳಲು ಸಾಧ್ಯವೆಂದು ತಿಳಿಸಿದರು. 


ವೇದಿಕೆಯಲ್ಲಿ ಸಂಸ್ಥೆಯ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್., ಉಪಪ್ರಾಂಶುಪಾಲ ಪ್ರದೀಪ್ ಕೆ.ವೈ. ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಅಪರ್ಣಾ ಉಪಾಧ್ಯಾಯ ನಿರೂಪಿಸಿ, ವಂದಿಸಿದರು.


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top