ಎಸ್‌ಡಿಎಂ ಪಿಯು ಕಾಲೇಜಿನ ಘನತೆಗೆ ಇನ್ನೊಂದು ಗರಿ

Upayuktha
0

 


ಉಜಿರೆ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ನಡೆಸಲ್ಪಡುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಷನ್ ಅಂಡ್ ರಿಸರ್ಚ್ (IISER) ಇವರು ಜೂನ್ ತಿಂಗಳಿನಲ್ಲಿ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ 1327ನೇ ರ್‍ಯಾಂಕ್ ಅನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. 

ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಹಾಗೂ ಶಿಕ್ಷಕ ವೃಂದ ಅಭಿನಂದಿಸಿರುತ್ತಾರೆ.


ಪ್ರಮೋದ್ ಕುಮಾರ್ ಬಿ, ಪ್ರಾಂಶುಪಾಲರು. ಎಸ್ ಡಿ ಎಂ ಪದವಿ ಪೂರ್ವ ಕಾಲೇಜು, ವಿದ್ಯಾರ್ಥಿಯನ್ನು ಅಭಿನಂದಿಸಿದ್ದು, ಹರಿಕೃಷ್ಣ ಅವರ ಅಧ್ಬುತ ಸಾಧನೆಯಿಂದ ಕಾಲೇಜಿನ ಘನತೆಗೆ ಮತ್ತೊಂದು ಗರಿ ಸೇರಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳು ಎಂದರೆ ಕೇವಲ CET ಅಥವಾ NEET ಮಾತ್ರ ಎಂಬ ಭ್ರಮೆಯನ್ನು ಹೋಗಲಾಡಿಸುವಂತಿದೆ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವಿವಿಧ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕವೂ ಉನ್ನತ ಶಿಕ್ಷಣದ ಅವಕಾಶಗಳನ್ನು ಪಡೆದುಕೊಳ್ಳಬಹುದು ಎಂಬುದನ್ನು ಮತ್ತು ಮುಂದಿನ ವಿದ್ಯಾರ್ಥಿಗಳಿಗೆ ಈ ಸಾಧನೆ ಸ್ಪೂರ್ತಿದಾಯಕವಾಗಿದೆ ಎಂದರು.


ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾದ ನಂತರ ನನಗೆ ವಿಶೇಷ ಅನುಭವಗಳು ದೊರೆತವು. ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ವಿದ್ಯಾಭ್ಯಾಸ ನೀಡುತ್ತಿದ್ದು, ವಿದ್ಯಾರ್ಥಿ ವೇತನದ ಮೂಲಕ ಓದಲು ಉತ್ಸಾಹ ಇರುವ ಹಲವಾರು ಬಡ ಕುಟುಂಬದ ಮಕ್ಕಳಿಗೆ ಆರ್ಥಿಕ ನೆರವು ಮತ್ತು ಪ್ರೋತ್ಸಾಹ ನೀಡುತ್ತಾ ಬಂದಿದ್ದೀರಿ. ನೀವು ನೀಡಿರುವ ಸಂಸ್ಕಾರ ಜೀವನ ಪರ್ಯಂತ ಜೊತೆಗಿರುತ್ತದೆ. ನೀವು ನೀಡಿದ ಸವಲತ್ತುಗಳು ನನ್ನ ಭವಿಷ್ಯದ ಮೆಟ್ಟಿಲುಗಳು. ಶಿಕ್ಷಕ ವೃಂದದ ಆಶಯ, ಪ್ರೋತ್ಸಾಹ, ತ್ಯಾಗ, ಆಶೀರ್ವಾದ, ಸಹಕಾರಕ್ಕೆ ನನ್ನ ಅನಂತಾನಂತ ಧನ್ಯವಾದಗಳು. ಎಂದು ಸಾಧಕ ವಿದ್ಯಾರ್ಥಿ ಹರಿಕೃಷ್ಣ ಅಭಿಪ್ರಾಯ ಪಟ್ಟರು. 


ಉಪಯುಕ್ತ ನ್ಯೂಸ್ ಈಗ ಸ್ವದೇಶಿ ಸಾಮಾಜಿಕ ಜಾಲತಾಣ Arattai ನಲ್ಲಿ... ನಮ್ಮ ಚಾನೆಲ್‌ಗೆ ನೀವೂ ಜಾಯಿನ್ ಆಗಿ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top